August 26, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಬೀದರ್ ಪೊಲೀಸರಿಂದ ಕೋಟಿ ಮೌಲ್ಯದ ಮಾದಕ ವಸ್ತು ನಾಶ..!

ಬೀದರ್ : ಜಿಲ್ಲೆಯಾದ್ಯಂತ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ, ಜಪ್ತಿ ಮಾಡಲಾಗಿದ್ದ 9.41 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಬೀದರ್ ಪೊಲೀಸರು ನಾಶಪಡಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಧನ್ನೂರು ಸಮೀಪದ ಜೈವಿಕ ತಾಜ್ಯ ವಿಲೇವಾರಿ ಕುಲುಮೆ ಘಟಕದಲ್ಲಿ 997 ಕೆ.ಜಿ ಗಾಂಜಾ, 51 ಸಾವಿರಕ್ಕೂ ಅಧಿಕ ನಶೆ ಗುಳಿಗೆಗಳು ಮತ್ತು 743 ಮಾದಕ ಸಿರಪ್‌ಗಳನ್ನು ನಾಶಪಡಿಸಿದ್ದಾರೆ.

ಜಿಲ್ಲಾ ಡ್ರಗ್ಸ್ ವಿಲೇವಾರಿ ಸಮಿತಿಯ ನಿಯಮಗಳ ಪ್ರಕಾರ ಎಸ್ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಕೋಟಿ ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಲಾಗಿದೆ. ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ 22 ಪ್ರಕರಣಗಳಲ್ಲಿ ಜಪ್ತಿಯಾಗಿದ್ದ ಮಾದಕ ದ್ರವ್ಯಗಳನ್ನು ನಾಶ ಮಾಡಿ, ಅಕ್ರಮ ಮಾದಕ ದ್ರವ್ಯ ಮಾರಾಟ ಮಾಡುವ ದಂಗೆಕೋರರಿಗೆ ಎಸ್ಪಿ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ : ಪ್ರಯಾಣಿಕರ ಗಮನಕ್ಕೆ; ನಾಳೆ ಮುಂಜಾನೆ ಬೆಳಿಗ್ಗೆಯಿಂದಲೇ ಮೆಟ್ರೋ ಸೇವೆ ಆರಂಭ..!

Related posts

ಎಸ್‌ಐಆರ್‌ ಸಮೀಕ್ಷೆ; ಅಧಿಕಾರಿಯ ಮೇಲೆ ಹಲ್ಲೆ – ಡಿಜೆಹಳ್ಳಿಯ ಇಬ್ಬರು ಅರೆಸ್ಟ್‌..!

Kalpana Editor

MLC ಸ್ಥಾನ ಕೊಡಿಸ್ತೇನೆಂದವನಿಗೆ ₹1.50 ಕೋಟಿ ಕೊಟ್ಟು ಕೈಸುಟ್ಟುಕೊಂಡ ಮಹಿಳೆ..!

Kalpana Editor

ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!

kknewskannada1987@gmail.com