21.5 C
ಬೆಂಗಳೂರು
October 13, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಕೋತಿಗಳಿಗೆ ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು..!

ತಮಿಳುನಾಡು : ಹಣ್ಣಿಗಾಗಿ ಮುತ್ತಿಗೆ ಹಾಕಿದ ಕೋತಿಗಳಿಗೆ ಹೆದರಿ ನವವಿವಾಹಿತ ಮಹಿಳೆಯೊಬ್ಬರು ಬೆಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದಿದೆ. ತೂತುಕುಡಿಯ ದಕ್ಷಿಣ ತಿಟ್ಟಂಕುಳಂ ಪ್ರದೇಶದ ಅನಿತಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಕಳೆದ ತಿಂಗಳಷ್ಟೇ 29 ವರ್ಷದ ಸುರೇಶ್ ಅವರನ್ನು ವಿವಾಹವಾಗಿದ್ದರು. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಸುರೇಶ್ ಇತ್ತೀಚೆಗೆ ಮನೆಗೆ ಮರಳಿದ್ದರು. ದಂಪತಿ ಪೂಜೆ ಸಲ್ಲಿಸಲು ಕಜುಗುಮಲೈನಲ್ಲಿರುವ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮುಖ್ಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ, ದಂಪತಿ ಬೆಟ್ಟದ ತುದಿಯಲ್ಲಿರುವ ಉಚಿಪಿಳ್ಳಯಾರ್ ದೇವಾಲಯಕ್ಕೆ ಹತ್ತಿದರು. ದಂಪತಿ, ಕೋತಿಗಳಿಗೆ ಹಣ್ಣುಗಳನ್ನು ನೀಡಲು ಮುಂದಾದರು. ಈ ವೇಳೆ, ಹಲವು ಕೋತಿಗಳು ಇದ್ದಕ್ಕಿದ್ದಂತೆ ಅವರನ್ನು ಸುತ್ತುವರಿದಿವೆ. ಕೋತಿಗಳಿಗೆ ಹೆದರಿ ಮಹಿಳೆ ಬೆಟ್ಟದ ತುದಿಯಿಂದ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕಜುಗುಮಲೈನ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸೇರಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ : ಎಂಟು ತಿಂಗಳ ಮಗುವಿನ ಗಂಟಲಲ್ಲಿತ್ತು ಎಲ್​ಇಡಿ ಬಲ್ಬ್..!

Related posts

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಮಂಜು ವಿರುದ್ಧ ಎಫ್‌ಐಆರ್‌

Kalpana Editor

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಸರ್ಕಾರದ ವಿರುದ್ಧ ಆಕ್ರೋಶ – ಬಸವರಾಜ ಬೊಮ್ಮಾಯಿ

Kalpana Editor

ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ ಸಂಭ್ರಮ..!

kknewskannada1987@gmail.com