July 13, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು..!

ಬೆಂಗಳೂರು : ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯವಾಗಿದ್ದು, ಇಂಥವನ್ನು ಎದುರಿಸಬೇಕು, ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದರು.

ಬಳಿಕ ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪ್ರಿಯಾಂಕ್‌ ಖರ್ಗೆಗೆ ಮಾಜಿ ಸಿಎಂ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಎಕ್ಸ್​ ಮೂಲಕ ಶಾಸಕ ಪ್ರದೀಪ್ ಈಶ್ವರ್ ಪರ ಸಿಎಂ ಡಿಕೆ ಶಿವಕುಮಾರ್​​ ಕೂಡ ಪೋಸ್ಟ್​ ಮಾಡಿದ್ದು, ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಮೇಲೆ ಚಪ್ಪಲಿ‌ ಎಸೆದ ನೀಚ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿ. ಒಬ್ಬ ಯುವ ನಾಯಕನ ಜನಪ್ರಿಯತೆ, ಮಾತುಗಳನ್ನ ಜೀರ್ಣಿಸಿಕೊಳ್ಳಲಾಗದೆ ತರ್ಕದ ವೇದಿಕೆಯಿಂದ ತರಗೆಲೆ ರಾಜಕಾರಣಕ್ಕೆ ಇಳಿದಿರುವುದು ನಿಮ್ಮ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.

ಪ್ರಜಾಪ್ರಭುತ್ವದ ಆಶಯಗಳನ್ನು ಬೀದಿಗೆ ತಂದು ಹರಾಜಿಗಿಟ್ಟಿರುವ ನೀವು ನಿಮ್ಮ ಕಾರ್ಯಕರ್ತರಿಗೆ ಕಲಿಸುತ್ತಿರುವ ಸಂಸ್ಕಾರವಾದರೂ ಇಂತಹುದೇನಾ? ನೆನಪಿರಲಿ, ಇಂತಹ ಹಿಂಸಾತ್ಮಕ ದಾಳಿಗಳು ನಮ್ಮ ನಾಯಕರ ಹೋರಾಟದ ಹಾದಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆಯೇ ಹೊರತು ಎಂದಿಗೂ ಧೃತಿಗೆಡಿಸುವುದಿಲ್ಲ. ಇದು ಬಸವಣ್ಣನವರ, ಕುವೆಂಪು ಅವರ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ನಾವು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ. ಇದನ್ನೂ ಓದಿ : ಮತ್ತೆ ವಾಣಿಜ್ಯ ಸಿಲಿಂಡರ್‌ ದರ ಏರಿಕೆಗೆ ತೈಲ ಕಂಪನಿಗಳ ನಿರ್ಧಾರ; ಬಳಕೆದಾರರಿಗೆ ಬೆಲೆ ಏರಿಕೆ ಬಿಸಿ..!

Related posts

ನಮಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು; ಡಿಸಿಎಂ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು..!

Kalpana Editor

ಫಿಫಾ ವಿಶ್ವಕಪ್‌ನಲ್ಲಿ ಮೊರಾಕ್ಕೊ ಸೋತಿದ್ದಕ್ಕೆ ಕಣ್ಣೀರಿಟ್ಟ ನಟಿ ನೋರಾ ಫತೇಹಿ

Kalpana Editor

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ..!

Kalpana Editor