21.5 C
ಬೆಂಗಳೂರು
October 13, 2026
kranthikidi.com
ತಾಜಾಸುದ್ದಿರಾಜ್ಯ

ಕರಾವಳಿ, ಮಲೆನಾಡಲ್ಲಿ ವರುಣಾರ್ಭಟ – ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ವ್ಯಾಪಕವಾಗಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಮಿಂಚು ಮತ್ತು ಭಾರೀ ಮಳೆಯ ಸಂದರ್ಭ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ.

ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ವರ್ಷಧಾರೆ ಅಂದಾಜಿಸಲಾಗಿದೆ. ಬೆಂಗಳೂರು ನಗರದಾದ್ಯಂತ, ಮೋಡ ಕವಿದ ವಾತಾವರಣ ಕಂಡುಬರಲಿದೆ. ಅದಾಗಿಯೂ ತೀವ್ರ ಗಾಳಿಯ ಜೊತೆಗೆ ಕೆಲ ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ : ಮುಂಬೈ ತೊರೆದು ಬೆಂಗಳೂರಿಗೆ ಹಾರ್ದಿಕ್‌ ಪಾಂಡ್ಯ ಶಿಫ್ಟ್‌..!

Related posts

ಬೆಂಗಳೂರಲ್ಲಿ ಹಣ್ಣು-ತರಕಾರಿಗಳ ಬೆಲೆ ಗಗನಕ್ಕೆ ಏರಿಕೆ..!

Kalpana Editor

ಕಾಯಿಲೆಯಿಂದ ಬಳಲುತ್ತಿದ್ದ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ..!

Kalpana Editor

ಮೈಸೂರಿಗೆ ಪ್ರಧಾನಿ ಮೋದಿ ಭೇಟಿ; ವಿವೇಕಾನಂದ ಸ್ಮಾರಕ ಲೋಕಾರ್ಪಣೆ..!

Kalpana Editor