July 12, 2026
kranthikidi.com
ತಾಜಾಸುದ್ದಿರಾಜ್ಯ

ಇಂದಿನಿಂದ ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ..!

ಬೆಂಗಳೂರು : ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್, ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ, ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂಪಾಯಿಗಳಷ್ಟು ಕಡಿತಗೊಳಿಸಲಾಗಿದ್ದು, ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ ಎಂದು ಹೇಳಲಾಗಿದೆ.

ಈ ವರ್ಷದ ಫೆಬ್ರವರಿ 28 ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯು ಜಾಗತಿಕವಾಗಿ ತೀವ್ರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿತ್ತು. ಈ ದಾಳಿಯ ನಂತರ, ಇರಾನ್ ತನ್ನ ನಿಯಂತ್ರಣದಲ್ಲಿರುವ ‘ಸ್ಟ್ರೈಟ್ ಆಫ್ ಹಾರ್ಮುಜ್’ ಜಲಸಂಧಿಯ ಮೂಲಕ ಕಚ್ಚಾ ತೈಲ ಮತ್ತು ಅನಿಲವನ್ನು ಸಾಗಿಸುವ ಹಡಗುಗಳ ಸಂಚಾರವನ್ನು ನಿರ್ಬಂಧಿಸಿತ್ತು.

ಈ ಪೂರೈಕೆ ವ್ಯತ್ಯಯದಿಂದಾಗಿ ವಿಶ್ವಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಗಗನಕ್ಕೇರಿದ್ದವು. ಇದೀಗ ಹೋಟೆಲ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, ಕಳೆದ ಜೂನ್ ತಿಂಗಳಲ್ಲಿ 3,198 ರೂಪಾಯಿ ತಲುಪಿದ್ದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ದರವು, ಸದ್ಯ 3,021 ರೂಪಾಯಿಗೆ ಇಳಿಕೆಯಾಗಿದೆ.

ಹಾರ್ಮುಜ್ ಜಲಸಂಧಿಯ ಇಂಧನ ಪೂರೈಕೆ ಅಡಚಣೆಯ ನಂತರ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಒಟ್ಟು ನಾಲ್ಕು ಬಾರಿ ಹೆಚ್ಚಿಸಲಾಗಿತ್ತು. ಭಾರಿ ನಷ್ಟದ ಹಿನ್ನೆಲೆಯನ್ನು ಉಲ್ಲೇಖಿಸಿ ತೈಲ ಕಂಪನಿಗಳು ಮಾರ್ಚ್‌ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ. ಮತ್ತು ಮೇ ತಿಂಗಳಲ್ಲಿ ಬರೋಬ್ಬರಿ 993 ರೂ.ನಷ್ಟು ಬೆಲೆ ಏರಿಕೆ ಮಾಡಿದ್ದವು.

ಜೂನ್‌ನಲ್ಲಿ ಮತ್ತೊಮ್ಮೆ 42 ರೂ. ಹೆಚ್ಚಿಸಲಾಗಿತ್ತು. ಹೀಗೆ ಒಟ್ಟು ನಾಲ್ಕು ಕಂತುಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 1,374.50 ರೂ.ನಷ್ಟು ಹೆಚ್ಚಿಸಲಾಗಿತ್ತು. ಅದೇ ರೀತಿ, ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕೂಡ ಎರಡು ಕಂತುಗಳಲ್ಲಿ ಒಟ್ಟು 89 ರೂ.ನಷ್ಟು ಹೆಚ್ಚಿಸಲಾಗಿತ್ತು. ತೈಲ ಕಂಪನಿಗಳು ಮೊದಲು ಮಾರ್ಚ್‌ನಲ್ಲಿ 60 ರೂ. ಮತ್ತು ನಂತರ ಜೂನ್‌ನಲ್ಲಿ 29 ರೂ.ನಷ್ಟು ಬೆಲೆಯನ್ನು ಏರಿಸಿದ್ದವು ಎನ್ನಲಾಗಿದೆ. ಇದನ್ನೂ ಓದಿ : ಕರಾವಳಿ, ಮಲೆನಾಡಲ್ಲಿ ವರುಣಾರ್ಭಟ – ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್

Related posts

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ: ಈಶ್ವರ ಖಂಡ್ರೆ

Kalpana Editor

ಗದಗದಲ್ಲಿ ಪರೀಕ್ಷಾ ಗೋಲ್‌ಮಾಲ್; ಬಾಗಿಲು ಬಂದ್ ಮಾಡಿ ಒಳಗೆ ಎಕ್ಸಾಮ್ ನಡೆಸಿದ ಸಿಬ್ಬಂದಿ

Kalpana Editor

ಪಾಗಲ್​​ ಪ್ರೇಮಿಯ ದಾರುಣ ಅಂತ್ಯ – ಸ್ಫೋಟಕದ ಬಗ್ಗೆ ಖಾಕಿ ತನಿಖೆ..!

Kalpana Editor