27.8 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ – 7 ಮಂದಿ ಬಲಿ

ರಾಮನಗರ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ದುರಂತ ಸಂಭವಿಸಿದ್ದು, ಸುಮಾರು 40 ಅಡಿ ಮೇಲಿಂದ ಬಂಡೆ ಬಿದ್ದ ಪರಿಣಾಮ ದೊಡ್ಡ ಪ್ರಮಾಣ ಸಾವುನೋವು ಉಂಟಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ದುರಂತ ಸ್ಥಳದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಾವೇರಿ ಕ್ರಷರ್‌ನಲ್ಲಿ ಘಟನೆ ನಡೆದಿದ್ದು, ಈ ವೇಳೆ 10-15 ಜನ ಬಿಹಾರದವರು, 2-3 ಸ್ಥಳೀಯರು ಕೆಲಸ ಮಾಡುತ್ತಿದ್ದರು. ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 5 ಜನ ಕೂಲಿ ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆರ್‌.ಆರ್‌.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕು ಬಂಡೆ ಬಿದ್ದಿದೆ. ತಾನು ಕೆಲಸ ಮಾಡುತ್ತಿದ್ದ ಸ್ಥಳದಿಂದ ಕೇವಲ 10 ಅಡಿ ದೂರದಲ್ಲಿ ಘಟನೆ ನಡೆದಿದೆ ಎಂದು ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರಯವ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ, ಅನುಮತಿ ಪಡೆದೇ ಬಂಡೆ ಸ್ಫೋಟಿಸಿದ್ದಾರೆ. ಆದರೆ ಹೇಗೆ ದುರಂತ ಸಂಭವಿಸಿತು ಎಂದು ಕಾರಣ ಗೊತ್ತಿಲ್ಲ. ಸ್ಥಳ ಪರಿಶೀಲನೆ ಬಳಿಕ ಅವಘಡಕ್ಕೆ ಕಾರಣ ಗೊತ್ತಾಗಲಿದೆ ಎಂದವರು ತಿಳಿಸಿದ್ದಾರೆ. ಮತ್ತೊಂದೆಡೆ ದುರಂತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹೊಟ್ಟೆಪಾಡಿಗಾಗಿ ಒಂದು ಊರಿನಿಂದ ಮತ್ತೊಂದು ಊರಿಗೆ ಬಂದಿದ್ದೇವೆ. ಕಳೆದ ಒಂದು ವರ್ಷದಿಂದ ಇಲ್ಲಿಗೆ ಬಂದು ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ ಎಂದು ಅಲವತ್ತುಕೊಂಡಿದ್ದಾರೆ.

ಕಲ್ಲು ಕ್ವಾರಿಯಲ್ಲಿ ದುರಂತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಎಸ್​​.ಟಿ. ಸೋಮಶೇಖರ್​​, 10 ಕಾರ್ಮಿಕರ ಪೈಕಿ 7 ಮಂದಿ ದುರಂತದಲ್ಲಿ ಮೃತಪಟ್ಟಿರುವ ಮಾಹಿತಿ ಇದೆ. ಈ ಹಿಂದೆಯೇ ಎಚ್ಚೆತ್ತುಕೊಳ್ಳಿ ಎಂದು ಹೇಳಿದ್ದೆ.​ ಘಟನೆ ಸಂಬಂಧ ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ವಿರುದ್ಧ ಕೇಸ್​ ದಾಖಲಾಗಬೇಕು. ಘಟನೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ : ನಿರ್ಭೀತ ಪತ್ರಿಕಾ ವೃತ್ತಿ ಸವಾಲನ್ನು ವೃತ್ತಿಪರತೆಯಿಂದ ಗೆಲ್ಲಿ – ಸಿಎಂ ಡಿ.ಕೆ. ಶಿವಕುಮಾರ್

Related posts

‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ

Kalpana Editor

ನಟ ಪ್ರಕಾಶ್ ರಾಜ್ ವಿಳಾಸದಲ್ಲಿ ನೆಲೆಸಿಲ್ಲ, ಎಸ್‌ಐಆರ್‌ ಆರೋಪ ಸತ್ಯಕ್ಕೆ ದೂರ; ಕೇಂದ್ರ ನಗರ ಪಾಲಿಕೆ ಸ್ಪಷ್ಟನೆ..!

kknewskannada1987@gmail.com

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ – ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ..!

Kalpana Editor