July 12, 2026
kranthikidi.com
ತಾಜಾಸುದ್ದಿರಾಜ್ಯ

ಕಲ್ಲು ಕ್ವಾರೆ ದುರಂತ; ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ – ಹೆಚ್‌ಡಿಕೆ

ಬೆಂಗಳೂರು : ಕಲ್ಲು ಕ್ವಾರೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ನೊಂದ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಅಲ್ಲದೇ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು ಎಂದಿದ್ದಾರೆ.

ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇ ಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ : ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ಆರೋಪ; ಸಿಬ್ಬಂದಿಗಳಗೆ ನೋಟಿಸ್..!

Related posts

ಬೀಳಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ; ಶ್ರೀಗಂಧದ ಕಟ್ಟಿಗೆ ಜಪ್ತಿ..!

Kalpana Editor

ಪಿಎಸ್ಐ ಅಕ್ರಮ; ಅಮಾನತ್ತಾದ ಅಮೃತ್ ಪೌಲ್ ವಿರುದ್ಧ ತನಿಖೆಗೆ ಆದೇಶ..!

Kalpana Editor

ಕೋಯಿಕ್ಕೋಡ್‌ದಲ್ಲಿ ನಿಫಾ ಸೋಂಕು ದೃಢ – ಕೇರಳದಲ್ಲಿ ಹೈ ಅಲರ್ಟ್..!

Kalpana Editor