July 13, 2026
kranthikidi.com
ತಾಜಾಸುದ್ದಿರಾಜ್ಯ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

ಮೈಸೂರು : ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ನಂತರ ಬಹಳ ಆತುರಾತುರವಾಗಿ ಬಿಡದಿ ಟೌನ್‍ಶಿಪ್ ವಿಚಾರದಲ್ಲಿ ರೈತರ ಮೇಲೆ ದಬ್ಬಾಳಿಕೆ ಮಾಡುವಂಥ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ನಾನು, ನಮ್ಮ ವಿಪಕ್ಷ ನಾಯಕರು ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಒಂದು ಕಡೆ ಸರಕಾರವು ಶೇ 80ರಷ್ಟು ರೈತರು ಬಿಡದಿ ಟೌನ್‍ಶಿಪ್‍ಗೆ ಅನುಮತಿ ಕೊಟ್ಟಿದ್ದಾರೆಂದು ಹೇಳುತ್ತಿದೆ.

ಆದರೆ, ವಾಸ್ತವಿಕವಾಗಿ ಶೇ 70-80 ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಚಟುವಟಿಕೆಗೆ ಪೂರಕವಾದ ಜಮೀನನ್ನು ಕಸಿದುಕೊಳ್ಳಲು ಹೊರಟಿದ್ದಾರೆ ಎಂದು ಆರೋಪಿಸಿದರು. ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳು ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಬೇಕು. ಒಕ್ಕಲೆಬ್ಬಿಸುವ ಕೆಲಸಕ್ಕೆ ಕೈಹಾಕಬಾರದು ಎಂದು ಒತ್ತಾಯಿಸಿದರು. ಇದರ ಕುರಿತು ಸದನದಲ್ಲಿ ನಿಶ್ಚಿತವಾಗಿ ಚರ್ಚೆ ಆಗಲಿದೆ. ಸರಕಾರ ತಾನು ಮಾಡಿದ್ದೇ ಸರಿ ಎಂಬ ಧೋರಣೆ ಅನುಸರಿಸುತ್ತಿದೆ.

ಇದರ ಕುರಿತು ಸಮಗ್ರ ಚರ್ಚೆ ಮಾಡಲಿದ್ದೇವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಒಂದೆಡೆ ಎಸ್‍ಐಆರ್ ನಡೆಯುತ್ತಿದೆ. ಇನ್ನೊಂದು ಕಡೆ ಗೃಹಲಕ್ಷ್ಮಿ ಹಗರಣದ ಕುರಿತು ಹೋರಾಟ ಕೈಗೆತ್ತಿಕೊಳ್ಳಲು ಮುಂದಾಗಿದ್ದೇವೆ. ರೈತರ ಪರ ಹೋರಾಟ ರೂಪಿಸುತ್ತಿದ್ದೇವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಅಡ್ಡ ಮತದಾನದ ಗೊಂದಲ ಎಲ್ಲ ಮುಕ್ತಾಯವಾಗಿವೆ. ಅದು ಮುಗಿದ ಅಧ್ಯಾಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸದಾನಂದಗೌಡರೇ ಹೇಳಿದ್ದಾರೆ… ಡಿ.ವಿ.ಸದಾನಂದ ಗೌಡರ ಆಡಿಯೊ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ಆಡಿಯೊದಲ್ಲಿರುವುದು ನನ್ನ ಧ್ವನಿ ಅಲ್ಲ ಎಂದು ಸ್ವತಃ ಸದಾನಂದ ಗೌಡರೇ ಹೇಳಿಕೆ ನೀಡಿದ್ದಾರೆ. ಎಲ್ಲವನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು. ಈ ಪಕ್ಷದಲ್ಲಿನ ಕೆಲವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ ಅವರು, ವಿಶ್ವನಾಥ್ ಅವರೊಂದಿಗೆ ಸಹ ಮಾತನಾಡಿದ್ದಾರೆ. ಇಂತಹ ಎಲ್ಲ ಬಿಕ್ಕಟ್ಟುಗಳ ನಡುವೆ ಕಾರ್ಯಕರ್ತರಿಗೆ ಧೈರ್ಯ ತುಂಬಿ ಸಂಘಟನೆಯ ಕೆಲಸ ಮಾಡುತ್ತಿರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ : ಕಲ್ಲು ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ – ಸಿಎಂ ಡಿಕೆಶಿ

Related posts

ಬೆಂಗಳೂರು ರಸ್ತೆ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ – ಸಿಎಂ ಡಿಕೆಶಿ

Kalpana Editor

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!

Kalpana Editor

ನಟಿ ರುಕ್ಮಿಣಿ ವಸಂತ್‌ ಬಿಕಿನಿ ಫೋಟೋ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

Kalpana Editor