July 12, 2026
kranthikidi.com
ತಾಜಾಸುದ್ದಿರಾಜ್ಯ

ಮೀಟರ್​​​ ರೀಡಿಂಗ್​​ ಇಲ್ಲ – ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ..!

ಬೆಂಗಳೂರು : ಗೃಹಜ್ಯೋತಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ ಮುಂದಾಗಿದೆ.

ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

ಯಾರಿಗೆಲ್ಲಾ ಅನ್ವಯ – ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ. ಇದನ್ನೂ ಓದಿ : ಐಷಾರಾಮಿ ದಾಳಿ: 142 ಕೋಟಿ ನಗದು ಮತ್ತು ಶುದ್ಧ ಚಿನ್ನದ ಒಳ ಉಡುಪು ಜಪ್ತಿ..!

Related posts

ತ್ವಿಶಾ ಶರ್ಮಾ ಪ್ರಕರಣ; ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ..!

Kalpana Editor

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ನಟ ಪ್ರಕಾಶ್ ರಾಜ್‌

Kalpana Editor

ಸತತ ಸೋಲಿನಿಂದ ಕಂಗೆಟ್ಟ ಪೂಜಾ ಹೆಗ್ಡೆಗೆ ಬಾಲಿವುಡ್​​ನಲ್ಲಿ ಮೂಡಿದೆ ಆಶಾಕಿರಣ

Kalpana Editor