July 13, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ನಾಪತ್ತೆಯಾಗಿದ್ದ ಬಾಲಕಿ ಶವ ಪತ್ತೆ; ಆರೋಪಿಯನ್ನು ಹೊಡೆದು ಕೊಂದ ಸ್ಥಳೀಯರು..!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ 12 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಶಂಕಿತ ರೇಪ್ ಆರೋಪಿಯನ್ನ ಸ್ಥಳೀಯರೇ ಹಿಡಿದು ಥಳಿಸಿ ಕೊಂದಿದ್ದಾರೆ. ಸ್ನೇಹಿತನಿಗೆ ಗಿಫ್ಟ್ ತರಲು ಹೋಗಿದ್ದ ಬಾಲಕಿ ಶನಿವಾರ ನಾಪತ್ತೆಯಾಗಿದ್ದಳು. ಬಾಲಕಿಯನ್ನು ನಾಲ್ವರು ಅಪರಿಚಿತರು ಎಳೆದುಕೊಂಡು ಹೋಗಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಬಳಿಕ ಆಕೆಯ ಶವ ಗೋಣಿಚೀಲದಲ್ಲಿ ಪತ್ತೆಯಾಗಿತ್ತು.

ಬಾಲಕಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಬಾಲಕಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ರಸ್ತೆ ತಡೆ ನಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ, ಪೊಲೀಸ್ ವಾಹನಗಳ ಮೇಲೂ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಶಂಕಿತನಾಗಿ ಗುರುತಿಸಲಾದ ವ್ಯಕ್ತಿಯನ್ನು ಹಿಡಿದು ಥಳಿಸಿ ಕೊಂದಿದ್ದಾರೆ ಎನ್ನಲಾಗಿದೆ.

ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಬಾಲಕಿಯ ಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಬಾಲಕಿಯ ಕುಟುಂಬದೊಂದಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಫೋನ್ ಕರೆ ಮೂಲಕ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಪ್ರಕರಣ ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದ್ದು, ತೃಣಮೂಲ ಕಾಂಗ್ರೆಸ್ ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿದೆ. ಬಾಲಕಿಯ ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ತಮ್ಮನ್ನು ಪೊಲೀಸರು ತಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದನ್ನೂ ಓದಿ : ಇಂದಿನಿಂದ ಮೋದಿ ವಿದೇಶಿ ಪ್ರವಾಸ – ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ಗೆ ಭೇಟಿ..!

Related posts

ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ..? ಈ ಒಂದು ಆಯ್ಕೆ..!

Kalpana Editor

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ – ಸಿಎಂ ಡಿಕೆ ಶಿವಕುಮಾರ್

Kalpana Editor

ದ್ರೌಪದಿ ಮುರ್ಮು ಜೀವನ ಕಥೆ ತೆರೆಗೆ; ನಿರ್ಮಾಣದ ಹೊಣೆ ಹೊತ್ತ ನಟ ಅಮೀರ್ ಖಾನ್

Kalpana Editor