July 13, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ, ವಿದ್ಯಾರ್ಥಿನಿ ಆತ್ಮಹತ್ಯೆ..!

ಬೆಂಗಳೂರು : 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಈ ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಮೃತದೇಹವನ್ನು ಹೊರಗೆ ತೆಗೆದಿದ್ದಾರೆ ಎನ್ನಲಾಗಿದೆ.

ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆದೆರೆ, ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ ಅಂತ ಗೆಳೆಯನಿಗೆ ಮೆಸೇಜ್‌ ಮಾಡಿದ್ದಾಳೆ. ಬಳಿಕ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾಳೆ. ನೆನ್ನೆ (ಸೋಮವಾರ) ಸ್ಯಾಂಕಿ ಕೆರೆ ಬಳಿ ಬಂದಿದ್ದ, ತೇಜು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇಂದು ಬೆಳಗಿನ ಜಾವ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಈ ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ..!

Related posts

ವೈರಲ್‌ ಆಗಿರೋದು ಎಐ ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು..!

Kalpana Editor

ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾ

Kalpana Editor

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ..!

Kalpana Editor