August 27, 2026
kranthikidi.com
ತಾಜಾಸುದ್ದಿರಾಜ್ಯ

ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

ಮಡಿಕೇರಿ : 2026ರ ಮೈಸೂರು ದಸರಾ ಮಹೋತ್ಸವಕ್ಕೆ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಈಗಾಗಲೇ ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಜೊತೆಗೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಇದರ ಭಾಗವಾಗಿ ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡ ಆನೆಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಿದ್ದು, ಈ ಬಾರಿ ಮೊದಲ ಬಾರಿಗೆ ಇಸಿಜಿ ಪರೀಕ್ಷೆಯನ್ನೂ ಮಾಡಲಾಗಿದೆ.

20ಕ್ಕೂ ಅಧಿಕ ಆನೆಗಳ ಆರೋಗ್ಯ ತಪಾಸಣೆ ನಡೆಸಿದ್ದು, ಆನೆಗಳ ರಕ್ತ ಮತ್ತು ಮಲದ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಪ್ರಯೋಗಾಲಯಗಳಿಗೆ ಪರೀಕ್ಷೆಗಾಗಿ ರವಾನಿಸಲಾಗಿದೆ. ಜೊತೆಗೆ ಹೆಣ್ಣಾನೆಗಳಿಗೆ ಅಲ್ಟ್ರಾಸೌಂಡ್ ಮೂಲಕ ಗರ್ಭಧಾರಣೆ ಪರೀಕ್ಷೆಯನ್ನೂ ನಡೆಸಲಾಗಿದೆ. ವಿಶೇಷವಾಗಿ, ಈ ಸಲ ಮೊದಲ ಬಾರಿಗೆ ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ಇಸಿಜಿ ಪರೀಕ್ಷೆ ನಡೆಸಿರುವುದು ಗಮನಾರ್ಹವಾಗಿದೆ.

ಎಲ್ಲಾ ವೈದ್ಯಕೀಯ ಪರೀಕ್ಷೆಗಳ ವರದಿ ಬಂದ ಬಳಿಕ ಅಧಿಕಾರಿಗಳ ತಂಡ ಸೂಕ್ತ ಆನೆಗಳನ್ನು ಆಯ್ಕೆ ಮಾಡಿ, ತಾತ್ಕಾಲಿಕ ಪಟ್ಟಿಯನ್ನು ರಾಜ್ಯಮಟ್ಟದ ಸಮಿತಿಗೆ ಸಲ್ಲಿಸಲಿದೆ. ಈ ವರ್ಷ ವಿಜಯದಶಮಿ ಹಬ್ಬ 20 ದಿನ ತಡವಾಗಿ ನಡೆಯುತ್ತಿರುವ ಹಿನ್ನೆಲೆ, ದಸರಾ ಗಜಪಡೆ ಆಯ್ಕೆ ಪ್ರಕ್ರಿಯೆಯೂ ವಿಳಂಬವಾಗಿ ಆರಂಭವಾಗಿದೆ. ಇದನ್ನೂ ಓದಿ : ರಾಜ್ಯದ ಪರಿಸ್ಥಿತಿ ಅವಲೋಕಿಸಿ, ಬರಗಾಲ ಪೀಡಿತ ಪ್ರದೇಶ ಘೋಷಣೆ – ಸಿಎಂ ಡಿಕೆಶಿ

Related posts

ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ; ರಾಹುಲ್ ವಿರುದ್ಧ ಧರ್ಮೇಂದ್ರ ವಾಗ್ದಾಳಿ..!

Kalpana Editor

ದರ್ಶನ್ ಪ್ರಕರಣ; ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗಳಿಗೆ ಜಾಮೀನು

Kalpana Editor

ಚೆನ್ನಮ್ಮ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಲು ಎರಡು ಟ್ರ್ಯಾಕ್ಟರ್ ಹೂ ತಂದ ಶಾಸಕ ಸ್ವರೂಪ್‌ ಪ್ರಕಾಶ್

Kalpana Editor