July 11, 2026
kranthikidi.com
ತಾಜಾಸುದ್ದಿರಾಜ್ಯ

ಹಾಸನದಲ್ಲಿ ಮಳೆಯಬ್ಬರ – ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ..!

ಹಾಸನ : ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಸದ್ಯ 2898.40 ಅಡಿಗಳಷ್ಟಿರುವ ನೀರಿದೆ. ಕಾವೇರಿಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವೂ ಒಂದಾಗಿದೆ.

ಹಾಸನ ಜಿಲ್ಲೆಯ, ಬೇಲೂರು, ತಾಲೂಕಿನಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದ್ದು, ಮುಂಜಾಗ್ರತೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಲೂರು ತಾಲೂಕಿನ, ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು, ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಇಂದು ರಜೆ ನೀಡಿದ್ದರಿಂದ ಶನಿವಾರ ಪೂರ್ತಿ ದಿನ ಶಾಲೆ ನಡೆಸುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ. ಇದನ್ನೂ ಓದಿ : ವಿದೇಶಿ ಹಿಂದೂ ದೇಗುಲಗಳ ಜೀರ್ಣೋದ್ಧಾರಕ್ಕೆ ಪ್ರಧಾನಿ ಮೋದಿ ಕೊಡುಗೆ..!

Related posts

‘ಬಾಸ್’ ಸಿನಿಮಾಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್, ವಿಜಯಲಕ್ಷ್ಮಿ

Kalpana Editor

ರಾಮ ಮಂದಿರ ದೇಣಿಗೆ ವಿವಾದ – ತುರ್ತು ವಿಚಾರಣೆಗೆ ಸುಪ್ರೀಂ ನಕಾರ..!

Kalpana Editor

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ; ಜನಜೀವನ ಅಸ್ತವ್ಯಸ್ತ..!

Kalpana Editor