August 27, 2026
kranthikidi.com
ತಾಜಾಸುದ್ದಿರಾಜ್ಯ

ಮಲೆನಾಡಲ್ಲಿ ಮಳೆ ಅಬ್ಬರ – ಹೆಬ್ಬೆ ಫಾಲ್ಸ್‌ನಲ್ಲಿ ಜಲವೈಭವ

ಚಿಕ್ಕಮಗಳೂರು : ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ತರೀಕೆರೆ ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ ಧುಮ್ಮಿಕ್ಕಿ ಹರಿಯುತ್ತಿದೆ. ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ ನೀರು ಧುಮ್ಮಿಕ್ಕುತ್ತದೆ.

ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಫಾಲ್ಸ್‌ನ ಜಲವೈಭವ ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಈ ಜಲಪಾತಕ್ಕೆ ಸ್ಥಳಿಯರು, ಪ್ರವಾಸಿಗರು ಮಿನಿ ಜೋಗ ಎಂದೇ ಕರೆಯುತ್ತಾರೆ. ಕೆಮ್ಮಣ್ಣುಗುಂಡಿ ತಪ್ಪಲಿನ ಕಾಡು ಹಾಗೂ ಕಾಫಿತೋಟಗಳ ಮಧ್ಯೆ ಈ ಜಲಪಾತ ಇದೆ.

ಈ ಪರಿಸರದಿಂದ ಜಲಪಾತದ ಸೌಂದರ್ಯ ಇಮ್ಮಡಿಗೊಂಡಿದೆ. ಈ ಸೌಂದರ್ಯವನ್ನು ಸವಿಯಲು ಪ್ರವಾಸಿಗರ ದಂಡೇ ಬರುತ್ತಿದೆ. ಈ ಜಲಪಾತಕ್ಕೆ ಕೆಮ್ಮಣ್ಣುಗುಂಡಿಯಿಂದ ಸುಮಾರು 7 ಕಿ.ಮೀ ಕಾಫಿ ತೋಟದ ಒಳಗೆ ಜೀಪ್‍ನಲ್ಲೇ ಹೋಗಬೇಕು. ಹೆಬ್ಬೆ ಜಲಪಾತ ತರೀಕೆರೆಯಿಂದ ಸುಮಾರು 35-40 ಕಿಮೀ ಮೀಟರ್ ದೂರದಲ್ಲಿದೆ. ಇದನ್ನೂ ಓದಿ : ಒಕ್ಕಲಿಗ ನಾಯಕರ ಡಿನ್ನರ್ ಮೀಟಿಂಗ್ ವಿಚಾರದ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

Related posts

ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ; ಇಂಡಿಗೋ ವಿಮಾನದಲ್ಲಿ ಚೀಟಿ ಪತ್ತೆ..!

Kalpana Editor

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ..!

Kalpana Editor

SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ – ಇಬ್ಬರು ಮಹಿಳಾ ಸಿಬ್ಬಂದಿಗೆ ಗಾಯ

Kalpana Editor