21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿರಾಜ್ಯ

ನಮ್ಮ ಮೆಟ್ರೋ ತಾಂತ್ರಿಕ ದೋಷ, ಮಾದಾವರ-ತಲಘಟ್ಟಪುರ ರೈಲು ಸಂಚಾರ ವಿಳಂಬ..!

ಬೆಂಗಳೂರು : ನಮ್ಮ ಮೆಟ್ರೋದ ಗ್ರೀನ್ ಲೈನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಕಾರಣ, ಈ ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಕ್ರಮ ಕೈಗೊಂಡಿದೆ. ತಾಂತ್ರಿಕ ಸಿಬ್ಬಂದಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮಾದಾವರದಿಂದ ತಲಘಟ್ಟಪುರದವರೆಗಿನ 33 ಕಿಲೋಮೀಟರ್ ಉದ್ದದ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ವಿಳಂಬ ಉಂಟಾಗಿದೆ. BMRCL ಸಮಸ್ಯೆಯನ್ನು ಆದ್ಯತೆ ಮೇಲೆ ಬಗೆಹರಿಸುವುದಾಗಿ ಮತ್ತು ಆದಷ್ಟು ಬೇಗ ಮೆಟ್ರೋ ಸಂಚಾರವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.

ಮುಂಜಾನೆ 8:50 ರಿಂದ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೀಕ್ ಅವರ್‌ನಲ್ಲಿ ಮೆಟ್ರೋ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬದಲಿ ಸಾರಿಗೆ ವ್ಯವಸ್ಥೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಕಳೆದ 15 ದಿನಗಳ ಹಿಂದೆಯಷ್ಟೇ ನೇರಳೆ ಮಾರ್ಗದಲ್ಲಿ ಇದೇ ರೀತಿಯ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಬಿಜೆಪಿಯ ಒಬ್ಬ ಲೀಡರ್ ಮಗನೂ RSS ನಲ್ಲಿ ಪೂರ್ಣ ಪ್ರಚಾರಕನಾಗಿಲ್ಲ – ಪ್ರಿಯಾಂಕ್‌ ಖರ್ಗೆ

Related posts

ಇಂದು ಕೊಡಗಿಗೆ ಸಿಎಂ ಡಿಕೆಶಿ ಭೇಟಿ; ನಲಪಾಡ್ ವಿವಾಹ ಸಮಾರಂಭದಲ್ಲಿ ಭಾಗಿ ಸಾಧ್ಯತೆ..!

kknewskannada1987@gmail.com

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕೆರಳಿಸಿದ ಕುತೂಹಲ

Kalpana Editor

ಸಿಎಂ ಆದ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಸಿಎಂ ಡಿಕೆ ಶಿವಕುಮಾರ್

Kalpana Editor