ಉಡುಪಿ : ಕೇರಳದ ಸಿಎಂ ವಿ.ಡಿ. ಸತೀಶನ್ ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ನಂತರ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು.
ಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದ್ದು, ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ.
ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್ ಅವರು ಆಗಮಿಸಿದ್ದ, ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ : ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ – ಸಿಎಂ ಡಿಕೆ ಶಿವಕುಮಾರ್
