August 25, 2026
kranthikidi.com
ತಾಜಾಸುದ್ದಿರಾಜ್ಯ

ಪಿಎಸ್ಐ ಅಕ್ರಮ; ಅಮಾನತ್ತಾದ ಅಮೃತ್ ಪೌಲ್ ವಿರುದ್ಧ ತನಿಖೆಗೆ ಆದೇಶ..!

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ 545 ಪಿಎಸ್ಐ ನೇಮಕಾತಿ ಅಕ್ರಮ ಹಗರಣವು ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಗರಣದ ಪ್ರಮುಖ ಆರೋಪಿಯಾಗಿ ಜೈಲು ಸೇರಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಸಸ್ಪೆಂಡೆಡ್ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಕೊನೆಗೂ ಇಲಾಖಾ ತನಿಖೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಕ್ರಮ ಕೈಗೊಂಡಿದೆ.

ಹಗರಣ ನಡೆದ ಅವಧಿಯಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ವಿರುದ್ಧ 2022 ರಲ್ಲೇ ಸಿಐಡಿ ಎಸ್‌ಐಟಿ ಪೊಲೀಸರು 1,406 ಪುಟಗಳ ದೋಷಾರೋಪ ಪಟ್ಟಿಯನ್ನು (ಚಾರ್ಜ್ ಶೀಟ್) ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸಲ್ಲಿಸಿದ್ದರು. ಚಾರ್ಜ್ ಶೀಟ್ ಸಲ್ಲಿಕೆಯಾಗಿ 4 ವರ್ಷ ಕಳೆದಿದ್ದರೂ, ಇಲಾಖಾ ವಿಚಾರಣೆ ನಡೆದಿರಲಿಲ್ಲ. ಸದ್ಯ ಜುಲೈ 9 ರಂದು ಇಲಾಖಾ ವಿಚಾರಣೆಯ ಚಾರ್ಜ್ ಶೀಟ್ ಜಾರಿಯಾಗುವ ಮೂಲಕ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಚಿವರೂ ಆಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಇಲಾಖಾ ತನಿಖೆಗೆ ಅಧಿಕೃತ ಅನುಮೋದನೆ ನೀಡಿದ್ದಾರೆ. ಅಖಿಲ ಭಾರತ ಸೇವೆ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969 ರ ನಿಯಮ 8(4) ರ ಅನ್ವಯ ಈ ಆಂತರಿಕ ತನಿಖೆ ಮುಂದುವರೆಯಲಿದೆ. ತನಿಖಾ ಸಂಸ್ಥೆ ನೀಡಿದ್ದ ವರದಿ ಹಾಗೂ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ತಮ್ಮ ಮೇಲಿನ ಆರೋಪಗಳಿಗೆ ವಿವರಣೆ ನೀಡುವಂತೆ ಡಿಪಿಎಆರ್ ಇಲಾಖೆಯು ಅಮೃತ್ ಪೌಲ್‌ಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದೆ.

ಈ ಆರಂಭದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಹಾಗೂ ಉತ್ತರ ಕರ್ನಾಟಕದ ಎರಡು ಠಾಣೆಗಳಲ್ಲಿ ದಾಖಲಾಗಿದ್ದ ಈ ಪ್ರಕರಣ, ನಂತರ ಸಿಐಡಿ ಎಸ್‌ಐಟಿಗೆ ವರ್ಗಾವಣೆಯಾಗಿತ್ತು. ರಾಜ್ಯ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರು ಈ ಹಗರಣದಲ್ಲಿ ಜೈಲು ಪಾಲಾಗಿದ್ದು, ಈಗ ಇಲಾಖಾ ವಿಚಾರಣೆ ತೀವ್ರಗೊಂಡಿದೆ. ಇದನ್ನೂ ಓದಿ : ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆ ಮನವಿ; ಪ್ರಿಯಾಂಕ್ ಖರ್ಗೆ

Related posts

ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ ಮಾಡಿದೆ; ಇರಾನ್‌ ಆರೋಪ..!

Kalpana Editor

ಭೀಮನ ಮೇಲೆ ಕಲ್ಲು ತೂರಾಟ; ಕಾರ್ಮಿಕನೊಬ್ಬ ವಿರುದ್ಧ ಸ್ಥಳೀಯರು ಗರಂ

Kalpana Editor

ನನಗೆ ಸಚಿವ ಸ್ಥಾನ ನೀಡಲೇಬೇಕು, ಅದನ್ನು ಬಿಟ್ಟು ಬೇರೆ ಮಾತುಕತೆ ಇಲ್ಲ – ಎಂ ಕೃಷ್ಣಪ್ಪ

kknewskannada1987@gmail.com