27.3 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿಸಿನಿಮಾ

ಬಹುನಿರೀಕ್ಷಿತ ರಾಮಾಯಣ ಸಿನಿಮಾ ಟ್ರೇಲರ್‌ ರಿಲೀಸ್‌ಗೆ ಡೇಟ್‌ ಫಿಕ್ಸ್‌..!

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್‌ ಆಗಲಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾ, ಇಡೀ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದೆ.

ಈ ಕುರಿತು ಚಿತ್ರ ತಂಡ ಪೋಸ್ಟ್‌ ಹಂಚಿಕೊಂಡಿದ್ದು, ಜುಲೈ 24ರಂದು ವಿಶ್ವಾದ್ಯಂತ ಏಕಕಾಲಕ್ಕೆ ಟ್ರೇಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಇದಕ್ಕೂ ಮುನ್ನ ಏ.2ರಂದು ಚಿತ್ರತಂಡ ಟೀಸರ್ ರಿಲೀಸ್ ಮಾಡಿತ್ತು. ಮೊದಲ ಬಾರಿಗೆ ಮರ್ಯಾದಾ ಪುರುಷೋತ್ತಮ ರಾಮನ ಗೆಟಪ್‌ನಲ್ಲಿ ರಣಬೀರ್ ಕಪೂರ್ ಅವರನ್ನು ಪರಿಚಯಿಸಿದ್ದರು. ಅದರಲ್ಲಿ ದೃಶ್ಯ ವೈಭವ ಹೇಗಿದೆ ಎಂಬುದನ್ನು ತೋರಿಸಿದ್ದರು. ಆದರೆ ಕಥೆಯ ಬಗ್ಗೆ ಹೆಚ್ಚು ಸುಳಿವು ನೀಡಿರಲಿಲ್ಲ.

ಈಗ ಬಿಡುಗಡೆಯಾಗಲಿರುವ ಟ್ರೇಲರ್‌ನಲ್ಲಿ ಮುಖ್ಯ ಪಾತ್ರಗಳು, ರಾಮಾಯಣ ಮಹಾಕಾವ್ಯವನ್ನು ಬೆಳ್ಳಿಪರದೆಯ ಮೇಲೆ ಎಷ್ಟು ಅದ್ಭುತವಾಗಿ ತರಲಿದ್ದಾರೆ ಎಂಬುದನ್ನು ತೋರಿಸುವ ನಿರೀಕ್ಷೆಯಿದೆ. ಭಾರತದ ಪ್ರಾಚೀನ ಮಹಾಕಾವ್ಯ ಆಧರಿಸಿದ ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಇದರಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿದ್ದರೆ, ಸನ್ನಿ ಡಿಯೋಲ್ ಹನುಮಂತನಾಗಿ ಹಾಗೂ ರವಿ ದುಬೆ ಲಕ್ಷ್ಮಣನಾಗಿ ನಟಿಸುತ್ತಿದ್ದಾರೆ. ರಾಮಾಯಣದ ಮೂಲ ಭಾವನೆಗಳಿಗೆ ಧಕ್ಕೆ ಬಾರದಂತೆ, ಅತ್ಯಾಧುನಿಕ ಗ್ರಾಫಿಕ್ಸ್ ಬಳಸಿ ಈ ಕಥೆಯನ್ನು ಬೆಳ್ಳಿಪರದೆಯ ಮೇಲೆ ತರಲಾಗುತ್ತಿದೆ.

ನಿತೇಶ್ ತಿವಾರಿ ನಿರ್ದೇಶನದ ಈ ‘ರಾಮಾಯಣ’ ಸಿನಿಮಾವನ್ನು ನಮಿತ್ ಮಲ್ಹೋತ್ರಾ ಅವರ ‘ಪ್ರೈಮ್ ಫೋಕಸ್ ಸ್ಟುಡಿಯೋಸ್’, ಆಸ್ಕರ್ ಪ್ರಶಸ್ತಿ ವಿಜೇತ ಗ್ರಾಫಿಕ್ಸ್ ಸಂಸ್ಥೆ ‘ಡಿಎನ್‌ಇಜಿ’ ಮತ್ತು ಯಶ್ ಅವರ ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿವೆ. ಈ ಚಿತ್ರವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ಯೋಜಿಸಲಾಗಿದೆ. ವಿಶ್ವದಾದ್ಯಂತ ಐಮ್ಯಾಕ್ಸ್ ಚಿತ್ರಮಂದಿರಗಳಲ್ಲಿ ತೆರೆಕಾಣಲಿದ್ದು, ಮೊದಲ ಭಾಗವು 2026ರ ದೀಪಾವಳಿಗೆ ಮತ್ತು ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಇದನ್ನೂ ಓದಿ : ಪಿಎಸ್ಐ ಅಕ್ರಮ; ಅಮಾನತ್ತಾದ ಅಮೃತ್ ಪೌಲ್ ವಿರುದ್ಧ ತನಿಖೆಗೆ ಆದೇಶ..!

Related posts

ಆಸ್ಟ್ರೇಲಿಯಾ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿದ ಕೊಡಗಿನ ಮಹಿಳೆ

kknewskannada1987@gmail.com

ಫಾರ್ಮ್‌ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!

Kalpana Editor

ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು..!

Kalpana Editor