29.9 C
ಬೆಂಗಳೂರು
October 10, 2026
kranthikidi.com
ತಾಜಾಸುದ್ದಿರಾಜ್ಯ

ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು..!

ಬೆಳಗಾವಿ : ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಸೋರುತ್ತಿತ್ತು. ಹೀಗಾಗಿ ಮನೆ ದುರಸ್ತಿಗೆ ಇಬ್ಬರು ಕಾರ್ಮಿಕರು ಬಂದಿದ್ದರು. ಕಾರ್ಮಿಕರು ಮನೆಯ ಒಳಗೆ ರಿಪೇರಿ ಕೆಲಸದಲ್ಲಿ ತೊಡಗಿದ್ದಾಗ, ಮಳೆಗೆ ಸಂಪೂರ್ಣವಾಗಿ ನೆನೆದು ದುರ್ಬಲಗೊಂಡಿದ್ದ ಮಣ್ಣಿನ ಮೇಲ್ಛಾವಣಿ ಹಾಗೂ ಗೋಡೆಗಳು ಒಮ್ಮೆಗೇ ಇವರ ಮೇಲೆಯೇ ಕುಸಿದುಬಿದ್ದಿವೆ. ಇದರ ಪರಿಣಾಮ ಮಾದೇವ್ ಕೃಷ್ಣಪ್ಪ ಮತ್ತು ಸೈಯದ್ ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು.

ಈ ಘಟನೆಗೆ ಸಂಭವಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ತಕ್ಷಣವೇ ಧಾವಿಸಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ಹರಸಾಹಸ ಪಟ್ಟರು. ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಪಕ್ಕದ ಮಹಾರಾಷ್ಟ್ರದ ಜತ್ತ ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ತೀವ್ರ ರಕ್ತಸ್ರಾವ ಹಾಗೂ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಅಭಿಮಾನಿಗಳಿಗೆ ಹೆಲ್ತ್ ಕಾರ್ಡ್ ಕೊಡಿಸಿದ ನಟ ಶಿವರಾಜ್ ಕುಮಾರ್

Related posts

ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ..!

kknewskannada1987@gmail.com

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ; ಆರೋಪಿ ಪುಣ್ಯೇಶ್ ಅರೆಸ್ಟ್‌..!

Kalpana Editor

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ನಟ ಸ್ಪಷ್ಟನೆ..!

Kalpana Editor