July 22, 2026
kranthikidi.com
ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಇಟ್ಟರೆ, ಭಾರೀ ದಂಡ ಗ್ಯಾರಂಟಿ..!

ಬೆಂಗಳೂರು : ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿಯನ್ನು ಆರಂಭಿಸಿದರೆ ದಂಡ ವಿಧಿಸುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಬರೋಬ್ಬರಿ 490 ಕಿಲೋಮೀಟರ್‌ನಷ್ಟು ಸುದೀರ್ಘ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಯಾವುದೇ ಕಾರಣಕ್ಕೂ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ಮಾಡಬಾರದು ಎಂದು ಬಿಬಿಎಂಪಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವ್ಯಾಪಾರಸ್ಥರಿಗೆ ಖಡಕ್ ಎಚ್ಚರಿಕೆಯನ್ನೂ ನೀಡಿದ್ದರು.

ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಾದ ಕೆ.ಆರ್. ಮಾರ್ಕೆಟ್ ರಸ್ತೆ ಹಾಗೂ ವಿಕ್ಟೋರಿಯಾ ಆಸ್ಪತ್ರೆ ರಸ್ತೆಗಳಲ್ಲಿ ಇತ್ತೀಚೆಗೆ ಜೆಸಿಬಿಗಳ ಮೂಲಕ ದೊಡ್ಡ ಮಟ್ಟದ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ಮುಗಿದು ಮೂರ್ನಾಲ್ಕು ದಿನ ಕಳೆಯುವಷ್ಟರಲ್ಲೇ ವಿಕ್ಟೋರಿಯಾ ಆಸ್ಪತ್ರೆ ರಸ್ತೆಯ ಫುಟ್‌ಪಾತ್‌ಗಳ ಮೇಲೆ ವ್ಯಾಪಾರಸ್ಥರು ಮತ್ತೆ ಅಕ್ರಮವಾಗಿ ಅಂಗಡಿಗಳನ್ನು ಹೂಡಿ, ವ್ಯಾಪಾರ ಶುರು ಮಾಡಿದ್ದಾರೆ. ಇದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಫುಟ್‌ಪಾತ್ ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಅತಿಕ್ರಮಣವಾಗಿರುವ ವಿಷಯ ತಿಳಿಯುತ್ತಿದ್ದಂತೆ ಗರಂ ಆದ ಸಚಿವ ಕೃಷ್ಣಬೈರೇಗೌಡರು ಬಿಬಿಎಂಪಿ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ತೆರವು ಕಾರ್ಯಾಚರಣೆ ನಡೆಸಿ ಸುಮ್ಮನೆ ಕೂರುವಂತಿಲ್ಲ. ಅಧಿಕಾರಿಗಳು ನಿರಂತರವಾಗಿ ಪುನರ್ ಪರಿಶೀಲನೆ ನಡೆಸಬೇಕು.

ಒಮ್ಮೆ ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಅಕ್ರಮವಾಗಿ ವ್ಯಾಪಾರ ಆರಂಭಿಸಿದವರಿಗೆ ಸ್ಥಳದಲ್ಲೇ ಭಾರಿ ಪ್ರಮಾಣದ ದಂಡ ವಿಧಿಸಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಪಾದಚಾರಿಗಳ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಬಿಬಿಎಂಪಿ ಫುಟ್‌ಪಾತ್ ಸ್ಕ್ವಾಡ್ ಕಣ್ಗಾವಲು ಮತ್ತಷ್ಟು ಬಿಗಿಯಾಗಲಿದೆ. ಇದನ್ನೂ ಓದಿ : ಅಯೋಧ್ಯೆ, ಬದರಿನಾಥ ಬಳಿಕ ಈಗ ವೈಷ್ಣೋದೇವಿಯಲ್ಲೂ ಅಕ್ರಮ..!

Related posts

ಫಾರ್ಮ್‌ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!

Kalpana Editor

ಕೆಆರ್‌ಎಸ್‌ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!

Kalpana Editor

ಮಳೆ ಅಬ್ಬರ; ಕಾರವಾರ ತಾಲೂಕಿನಾದ್ಯಂತ, ಶಾಲೆಗಳಿಗೆ ರಜೆ ಘೋಷಣೆ..!

Kalpana Editor