July 22, 2026
kranthikidi.com
ಆರೋಗ್ಯತಾಜಾಸುದ್ದಿ

ಥೈರಾಯ್ಡ್ ಸಮಸ್ಯೆ ತಡೆಗಟ್ಟಲು ಪಾಲಿಸಬೇಕಾದ ಆರೋಗ್ಯಕರ ಅಭ್ಯಾಸಗಳು..!

ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗುತ್ತಿದೆ. ಅದರಲ್ಲಿಯೂ ಪುರುಷರಿಗಿಂತ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆ 5 ರಿಂದ 8 ಪಟ್ಟು ಹೆಚ್ಚು ಕಂಡುಬರುತ್ತದೆ. ಹಠಾತ್ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ತೀವ್ರ ಆಯಾಸ, ಕೂದಲು ಉದುರುವುದು ಹಾಗೂ ಮಾಸಿಕ ಚಕ್ರದಲ್ಲಿ ಅಸಮತೋಲನ ಕಂಡುಬಂದರೆ ಥೈರಾಯ್ಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ಹಾಗಾದರೆ ಮಹಿಳೆಯರಲ್ಲಿ ಹೆಚ್ಚಾಗಿ ಥೈರಾಯ್ಡ್ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು, ಇಂತಹ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಅದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು? – ಕತ್ತಿನ ಭಾಗದಲ್ಲಿರುವ ಚಿಟ್ಟೆ ಆಕಾರದ ಥೈರಾಯ್ಡ್ ಗ್ರಂಥಿ ದೇಹದ ಚಯಾಪಚಯ ಕ್ರಿಯೆ ಹಾಗೂ ಶಕ್ತಿಯನ್ನು ನಿಯಂತ್ರಿಸುವ ಹಾರ್ಮೋನ್‌ಗಳನ್ನು ಉತ್ಪಾದಿಸುತ್ತದೆ. ಮಹಿಳೆಯರಲ್ಲಿ ರೋಗನಿರೋಧಕ ವ್ಯವಸ್ಥೆಯ ವೈಶಿಷ್ಟ್ಯದಿಂದ ಹಶಿಮೋಟೋಸ್ ಥೈರಾಯಿಡಿಟಿಸ್ ಮತ್ತು ಗ್ರೇವ್ಸ್ ರೋಗದಂತಹ ಆಟೋಇಮ್ಯೂನ್ ಸಮಸ್ಯೆಗಳು ಹೆಚ್ಚಾಗಿ ಕಾಣಿಸಬಹುದು. ಇದರ ಜೊತೆಗೆ ಗರ್ಭಧಾರಣೆ, ಹೆರಿಗೆಯ ನಂತರದ ಅವಧಿ ಹಾಗೂ ಮೆನೋಪಾಸ್ ಸಮಯದಲ್ಲಿ ಉಂಟಾಗುವ ಹಾರ್ಮೋನ್ ಬದಲಾವಣೆಗಳು ಥೈರಾಯ್ಡ್ ಕಾರ್ಯದ ಮೇಲೆ ಪರಿಣಾಮ ಬೀರುತ್ತವೆ.

ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ : ನಿರಂತರ ಆಯಾಸ ಮತ್ತು ದೌರ್ಬಲ್ಯ, ಹಠಾತ್ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ಕೂದಲು ಉದುರುವುದು, ಚರ್ಮ ಒಣಗುವುದು, ಮಾಸಿಕ ಚಕ್ರದಲ್ಲಿ ಅಸಮತೋಲನ, ಗರ್ಭಧಾರಣೆಯಲ್ಲಿ ತೊಂದರೆ, ಮನಸ್ಥಿತಿಯಲ್ಲಿ ಆಗಾಗ ಬದಲಾವಣೆ, ಕುತ್ತಿಗೆಯಲ್ಲಿ ಊತ ಕಾಣಿಸಿಕೊಳ್ಳುವುದು, ವಯಸ್ಸಾದ ಮಹಿಳೆಯರಲ್ಲಿ ಈ ಲಕ್ಷಣಗಳನ್ನು ಮೆನೋಪಾಸ್ ಸಮಸ್ಯೆ ಎಂದು ತಪ್ಪಾಗಿ ತಿಳಿಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ.

ತಡೆಗಟ್ಟಲು ಏನು ಮಾಡಬೇಕು? – ಥೈರಾಯ್ಡ್ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆಹಚ್ಚಿದರೆ ಔಷಧಿ ಹಾಗೂ ನಿಯಮಿತ ತಪಾಸಣೆಯ ಮೂಲಕ ಸುಲಭವಾಗಿ ನಿಯಂತ್ರಿಸಬಹುದು. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಹಾಗೂ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವುದು ಉತ್ತಮ. ಥೈರಾಯ್ಡ್ ಲಕ್ಷಣಗಳನ್ನು ನಿರ್ಲಕ್ಷಿಸದೆ ಸಮಯಕ್ಕೆ ಸರಿಯಾಗಿ ಪರೀಕ್ಷೆ ಮಾಡಿಸಿಕೊಳ್ಳುವುದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡಬಹುದು. ಇದನ್ನೂ ಓದಿ : ರಾಮಭಕ್ತರ ಮೇಲೆ ಗುಂಡು ಹಾರಿಸಿದರಿಂದ ಇಂದು ಉಪದೇಶ; ಎಸ್‌ಪಿ ವಿರುದ್ಧ ಯೋಗಿ ಕಿಡಿ..!

Related posts

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ..!

Kalpana Editor

ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

Kalpana Editor

7ನೇ ತರಗತಿ ಪಾಸಾಗಿದ್ರೂ ಸಾಕು, ನಿಮಗಿದೆ ಸರ್ಕಾರಿ ಸಂಸ್ಥೆಯಲ್ಲಿ ದುಡಿಯುವ ಅವಕಾಶ..!

Kalpana Editor