July 22, 2026
kranthikidi.com
ತಾಜಾಸುದ್ದಿರಾಜ್ಯ

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ–ತಮಿಳುನಾಡು ಅತ್ತಿಬೆಲೆ ಗಡಿ ಬಂದ್..!

ಬೆಂಗಳೂರು : ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ನಿಲುವನ್ನು ಖಂಡಿಸಿ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರ್ನಾಟಕ–ತಮಿಳುನಾಡು ಗಡಿಭಾಗದ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿ ಗಡಿ ಬಂದ್‌ಗೆ ಕರೆ ನೀಡಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮೇಕೆದಾಟು ಯೋಜನೆಯನ್ನು ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಿದ್ದು, ಕಾವೇರಿ ನೀರು ಬಿಡುಗಡೆಗೆ ನಿರಂತರವಾಗಿ ಒತ್ತಾಯಿಸುತ್ತಿದೆ. ಇದೀಗ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೂಡ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದು ಖಂಡನೀಯ ಎಂದು ಆರೋಪಿಸಿದರು.

ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಧೋರಣೆಯನ್ನು ವಿರೋಧಿಸಿ ಅತ್ತಿಬೆಲೆ ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿ ಗಡಿ ಬಂದ್‌ಗೆ ಕರೆ ನೀಡಲಾಯಿತು. ಇದನ್ನೂ ಓದಿ : ನ್ಯಾಯವಾಗಿ ಬದುಕಿದರೆ ಜೈಲಿನ ಭಯ ಯಾಕೆ..? ನನ್ನ ಪ್ರಶ್ನೆಗೆ ಉತ್ತರ ಕೊಡಿ – ಸಿಎಂಗೆ ನಿಖಿಲ್ ಸವಾಲು

Related posts

ಮತ್ತೆ ಎಂಇಎಸ್ ಪುಂಡಾಟ; ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿ ಹರಿದು ಉದ್ಧಟತನ..!

Kalpana Editor

ಮೈಸೂರು ದಸರಾ 2026; ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ, ಆನೆಗಳಿಗೆ ಇಸಿಜಿ

Kalpana Editor

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

Kalpana Editor