July 22, 2026
kranthikidi.com
ತಾಜಾಸುದ್ದಿರಾಜ್ಯ

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ..!

ಬೆಂಗಳೂರು : ಕರ್ನಾಟಕದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಹಣಕಾಸು ಇಲಾಖೆಯ ಅನುಮೋದನೆಯೊಂದಿಗೆ ವಿವಿಧ ಇಲಾಖೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲು ತಿಳಿಸಲಾಗಿದೆ.

ಈ ಬೃಹತ್ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾಮಾನ್ಯ ಇಲಾಖೆಗಳಲ್ಲಿ 2% ಮತ್ತು ಪೊಲೀಸ್ ಇಲಾಖೆಯಲ್ಲಿ 3% ಹುದ್ದೆಗಳನ್ನು ಮೀಸಲಿಡಲಾಗಿದೆ. ಇದರಿಂದ ಸುಮಾರು 2,000 ಹುದ್ದೆಗಳು ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ದೊರೆಯಲಿವೆ. ಕಳೆದ ಬಾರಿ ಗೃಹ ಸಚಿವರಾಗಿದ್ದಾಗ 180 ಪೊಲೀಸ್ ಸಿಬ್ಬಂದಿ ಮತ್ತು 40 ಸಬ್ ಇನ್ಸ್‌ಪೆಕ್ಟರ್‌ಗಳು ಕ್ರೀಡಾ ಕೋಟಾದಡಿಯಲ್ಲಿ ಆಯ್ಕೆಯಾಗಿದ್ದರು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಹೊಸ ಪ್ರೋತ್ಸಾಹಧನ ಯೋಜನೆಯನ್ನೂ ಪರಿಚಯಿಸಿದೆ. ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೂ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಚಿನ್ನದ ಪದಕ ವಿಜೇತರಿಗೆ 35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ, ಕಂಚಿನ ಪದಕ ವಿಜೇತರಿಗೆ 15 ಲಕ್ಷ ರೂಪಾಯಿ ಬಹುಮಾನ ನೀಡುವುದನ್ನು ಮುಂದುವರಿಸಲಾಗುವುದು.

ಇದರ ಜೊತೆಗೆ, ರಾಜ್ಯದಲ್ಲಿ ಕ್ರೀಡಾ ಪ್ರತಿಭೆಗಳನ್ನು ಬೆಳೆಸಲು 50 ಕೋಚ್‌ಗಳನ್ನು ನೇಮಕ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಕ್ರಮಗಳು ರಾಜ್ಯದಲ್ಲಿ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲ ನೀಡುವ ಸರ್ಕಾರದ ಬದ್ಧತೆವಾಗಿದೆ. ಇದನ್ನೂ ಓದಿ : ಕೋವಿಡ್‌ನಿಂದ ಎರಡು ಸಾವು; ಗಡಿಯಲ್ಲಿ ಹೈ ಅಲರ್ಟ್ – ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ…!

Related posts

ಆಟವಾಡ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಮಗು – ಸ್ಥಿತಿ ಗಂಭೀರ..!

Kalpana Editor

ಸದಾ ಸುದ್ದಿಯಲ್ಲಿರಲು ಆರ್‌ಎಸ್‌ಎಸ್‌ ವಿರುದ್ಧ ಟೀಕಿಸುವ ಪ್ರಿಯಾಂಕ್ ಖರ್ಗೆ – ಶೋಭಾ ಕರಂದ್ಲಾಜೆ

Kalpana Editor

17ರಂದು ಫ್ರೀಡಂ ಪಾರ್ಕಿನಲ್ಲಿ ಬಿಜೆಪಿ ಜನಪ್ರತಿನಿಧಿಗಳ ಧರಣಿ, ರಿಯಲ್ ಎಸ್ಟೇಟ್ ಆದ್ಯತೆಯ ಸಿಎಂ – ವಿಜಯೇಂದ್ರ

Kalpana Editor