ಬಿಜೆಪಿಯ ಭ್ರಷ್ಟರು ಬಿಡದಿ ಟೌನ್ಡ್ ಶಿಪ್ ಹೆಸರಿನಲ್ಲಿ ಕುಮಾರಸ್ವಾಮಿ ಕುಟುಂಬದ ಜಮೀನಿನ ರಕ್ಷಿಸಲು ಜೆಡಿಎಸ್ ನೊಂದಿಗೆ ಕೈಜೋಡಿಸಿದ್ದಾರೆ. ನಿಜವಾದ ಭೂಗಳ್ಳರು ಕೆರೆಗಳ್ಳರು ಬಿಜೆಪಿಗರು ಎಂದು ಈಗಾಗಲೇ ರಾಜ್ಯದ ಜನತೆಗೆ ತಿಳಿದಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಕುಟುಂಬ ಹಾಗೂ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯ ನಾಯಕರುಗಳೊಂದಿಗೆ ಜನರ ದಿಕ್ಕು ತಪ್ಪಿಸುವ ರಾಜಕೀಯ ನಾಟಕ ಮಾಡುತ್ತಿರುವ ನಾಟಕ ಕಂಪನಿ ಎಂಬ ಆರೋಪ ಕೇಳಿಬಂದಿದೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ರೈತರ ಹಿತಾಸಕ್ತಿಯ ಹೆಸರಿನಲ್ಲಿ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಮನೋಹರ್ ಅವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ರಾಜ್ಯದ ಅಭಿವೃದ್ಧಿ ಹಾಗೂ ಹಿತಾಸಕ್ತಿಗಾಗಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರವಾಗಿ ಸಮರ್ಥವಾಗಿ ಧ್ವನಿಯೆತ್ತಿದ್ದಾರೆ ಇಂತಹ ನಾಯಕತ್ವದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ತಿಳಿಸಿದರು.
ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕುಮಾರಸ್ವಾಮಿ ಅವರು ಮೊದಲು 2006ರಲ್ಲಿ ಅಧಿಸೂಚನೆ ಹೊರಡಿಸಿದವರು ಯಾರು..? ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಹಾಗೂ ಈಗ ರೈತರ ಪರ ಹೋರಾಟದ ಹೆಸರಿನಲ್ಲಿ ಯಾರ ಹಿತಾಸಕ್ತಿಯನ್ನು ಕಾಪಾಡುತ್ತಿದ್ದೀರಿ ಎಂಬ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಆಗ್ರಹಿಸಲಾಯಿತು.
ಇದಲ್ಲದೆ, ತಮ್ಮ ಕುಟುಂಬದ ಹೆಸರಿನಲ್ಲಿರುವ ನೂರಾರು ಎಕರೆ ಭೂಮಿಯ ಕುರಿತು ಸಾರ್ವಜನಿಕವಾಗಿ ಮಾಹಿತಿ ನೀಡಲು ಸಿದ್ಧರ ತಾವುಗಳು..? ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ತಮ್ಮ ಕುಟುಂಬದ ಭೂ ಆಸ್ತಿಗಳ ಸಂಪೂರ್ಣ ವಿವರವನ್ನು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ನಾಯಕರು ಸವಾಲು ಹಾಕಿದರು.
ಕೇಂದ್ರ ಸರ್ಕಾರದ ವೈಫಲ್ಯಗಳಿಂದ ದೇಶದ ಯುವಕರು ಹಾಗೂ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿರುವುದು, ಕರ್ನಾಟಕಕ್ಕೆ ಸಮರ್ಪಕ ಅನುದಾನ ದೊರೆಯದಿರುವುದು ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುವ ಬದಲು, ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮಾಜಿ ಮಂತ್ರಿಗಳಾದ ಶ್ರೀ ಎಚ್.ಡಿ. ದೇವೇಗೌಡ ಅವರನ್ನು ಪ್ರತಿಭಟನೆಗಳಿಗೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದರು.
ಶ್ರೀ ದೇವೇಗೌಡ ಅವರ ಅನುಭವ ಮತ್ತು ಹಿರಿಯ ರಾಜಕೀಯ ಸ್ಥಾನಮಾನವನ್ನು ಕುಟುಂಬ ರಾಜಕಾರಣಕ್ಕಾಗಿ ಬಳಸದೇvರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳುವಂತೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ. ಆನಂದ್, ಜಿ. ಪ್ರಕಾಶ್, ಆನಂದ್ ಕುಮಾರ್ ಎಂ.ಎಸ್., ಕುಶಾಲ್ ಹರುವೇಗೌಡ, ಪುಟ್ಟರಾಜು, ಆದಿ, ನವೀನ್, ಬಾಲಾಜಿ, ರಂಜಿತ್, ಉಮೇಶ್, ಮಾಧವ, ಹೇಮರಾಜು ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ : ಬಿಡದಿ ಸ್ಯಾಟಲೈಟ್ ಟೌನ್‌ಶಿಪ್ ನೆಪದಲ್ಲಿ ರೈತರ ಜಮೀನು ಲೂಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಕಹಳೆ ಊದಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ
