July 23, 2026
kranthikidi.com
ತಾಜಾಸುದ್ದಿರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ..!

ಬೆಂಗಳೂರು : ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ. 1954ರ ಮೇ 25ರಲ್ಲಿ ಹೆಚ್‌.ಡಿ.ದೇವೇಗೌಡರ ಜೊತೆಗೆ ವಿವಾಹವಾಗಿದ್ದ, ಚೆನ್ನಮ್ಮ ಉಸಿರಾಟದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನು ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.

2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ದೇವೇಗೌಡ ಮತ್ತು ಕಾಳಮ್ಮ ದಂಪತಿಯ ಪುತ್ರಿಯ ಹಿರಿಯ ಮಗಳಾಗಿದ್ದ ಚನ್ನಮ್ಮ, ಅಂದಿನ ಕಾಲದಲ್ಲೇ SSLC ವರೆಗೆ ಶಿಕ್ಷಣ ಪೂರೈಸಿದ್ದರು. ಮನೆಯ ಹಿರಿಯ ಮಗಳಾಗಿ ನಾಲ್ವರು ತಮ್ಮಂದಿರು ಮತ್ತು ಮೂವರು ತಂಗಿಯರಿಗೆ ತಾಯಿಯಂತೆ ಆಸರೆಯಾಗಿದ್ದರು. ಇದನ್ನೂ ಓದಿ : ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಅಪಘಾತಕ್ಕೆ ವ್ಯಕ್ತಿ ಬಲಿ..!

Related posts

ಸಿಎಂ ಆದ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಸಿಎಂ ಡಿಕೆ ಶಿವಕುಮಾರ್

Kalpana Editor

ಕೆಪಿಎಸ್‌ಸಿ ನೇಮಕಾತಿ; 2024ನೇ ಸಾಲಿನ ಈ ಹುದ್ದೆಗಳಿಗೆ ಅರ್ಜಿ ಹಾಕಿರುವವರಿಗೆ ಮಹತ್ವದ ಸೂಚನೆ..!

Kalpana Editor

ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಯತೀಂದ್ರ ಪ್ರಮಾಣ ಸ್ವೀಕಾರ..!

Kalpana Editor