22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿಸಿನಿಮಾ

ಕನ್ನಡ ಚಿತ್ರರಂಗದ ಹಿರಿಯ ನಟಿ ಸರೋಜಾ ಶ್ರೀಶೈಲನ್ ಇನ್ನಿಲ್ಲ..!

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. (ಗುರುವಾರ) ಬೆಂಗಳೂರಿನ ವೈಯ್ಯಾಲಿಕಾವಲ್‌ನ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಈ ವಿಷಯ ಬೆಳಕಿಗೆ ಬಂದಿದೆ.

ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿ ಶೈಲಜಾ ಶ್ರೀಶೈಲನ್ ಅವರು, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಅವರನ್ನು ಅಗಲಿದ್ದಾರೆ. ‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು, ನಟ ಉಪೇಂದ್ರ ಅವರ ಬಹುತೇಕ ಸಿನಿಮಾಗಳಲ್ಲೂ ತಾಯಿ ಸೇರಿದಂತೆ ಹಲವು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ಜನಮನ ಗೆದ್ದಿದ್ದರು.

‘ಮುಕ್ತ’ ಮತ್ತು ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ತಮ್ಮದೇ ಛಾಪು ಮೂಡಿಸಿದ್ದರು. ಇಂದು ಶ್ರೀರಾಂಪುರದ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರ ನಡೆಸಲಾಯಿತು. ಇದನ್ನೂ ಓದಿ : ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Related posts

ಬಿಡದಿ ಬಿಕ್ಕಟ್ಟು – ಮುಖ್ಯಮಂತ್ರಿ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ ಎಂದ ಹೆಚ್.ಡಿ.ಕುಮಾರಸ್ವಾಮಿ

Kalpana Editor

ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಹಾಲು ಪತ್ತೆ..!

kknewskannada1987@gmail.com

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ; ಸಿಎಂ ಡಿಕೆ ಶಿವಕುಮಾರ್

Kalpana Editor