29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಪ್ರವಾಸಕ್ಕೆ ತೆರಳಿದ್ದ, ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು..!

ದಾವಣಗೆರೆ : ಪ್ರವಾಸಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು, ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ನಡೆದಿದೆ.

ವಿಷ್ಣು (10) ಮೃತಪಟ್ಟ ಬಾಲಕ. ವಿಷ್ಣು ಹರಪನಹಳ್ಳಿಯ ಗಾಜಿನಕೇರಿಯ ನಿವಾಸಿಗಳಾದ ವಿನೋದ್ – ವಿದ್ಯಾ ದಂಪತಿ ಪುತ್ರ. ಕುಟುಂಬ ಸದ್ಯಸರು ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ.

ಮಗನನ್ನು ಕಳೆದುಕೊಂಡ ತಂದೆ, ತಾಯಿಯರ ಆಕ್ರಂದನ ಮುಗಿಲು ಮುಟ್ಟಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

Related posts

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor

ಧರ್ಮೇಂದ್ರ, ಮಮ್ಮುಟ್ಟಿ ಸೇರಿ ಹಲವರಿಗೆ ಇಂದು ಪದ್ಮ ಪ್ರಶಸ್ತಿ ಪ್ರದಾನ..!

Kalpana Editor

ವಿಧಾನಸಭೆಯಲ್ಲಿ ʻಎನ್‌ಕೌಂಟರ್‌ʼ ಸದ್ದು – ವಿಪಕ್ಷಗಳು ನಿಗಿ ನಿಗಿ, ಗದ್ದಲ ಕೋಲಾಹಲ..!

kknewskannada1987@gmail.com