21.5 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿದೇಶ

ಉಪವಾಸ ಸತ್ಯಾಗ್ರಹ ಹಿಂಪಡೆಯಲು, ಷರತ್ತುಗಳನ್ನು ವಿಧಿಸಿದ ಸೋನಮ್ ವಾಂಗ್ಚುಕ್

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 21 ದಿನಗಳಿಂದ ಸತತ ನಿರಶನ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರಕ್ಕೆ 3 ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ.

ಆರೋಗ್ಯ ಸ್ಥಿತಿ ತೀವ್ರ ಕ್ಷೀಣಿಸಿದ ಹಿನ್ನೆಲೆಯಲ್ಲಿ ಶನಿವಾರ ದೆಹಲಿ ಪೊಲೀಸರು ವಾಂಗ್ಚುಕ್ ಅವರನ್ನು ಜಂತರ್ ಮಂತರ್‌ನಿಂದ ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಪ್ರಸ್ತುತ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಮತ್ತು ಗ್ಲೂಕೋಸ್ ಸ್ವೀಕರಿಸಲು ನಿರಾಕರಿಸುತ್ತಿರುವ ಅವರು, ಸರ್ಕಾರ ತಮ್ಮ ಮೂರು ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಇಂದೇ (ಜುಲೈ 20) ನಿರಶನ ಹಿಂಪಡೆಯುವುದಾಗಿ ತಿಳಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದ್ದು, ದೇಶಾದ್ಯಂತ ಬಂದಿರುವ ವಿದ್ಯಾರ್ಥಿಗಳು ಮತ್ತು ಹೋರಾಟಗಾರರು ಸಂಸತ್ತಿನವರೆಗೆ ಶಾಂತಿಯುತ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ಅವಕಾಶ ನೀಡಬೇಕು. ‘ನೀಟ್’ ಪರೀಕ್ಷೆ ಅಕ್ರಮ, ಪೇಪರ್ ಲೀಕ್ ಹಾಗೂ ಶಿಕ್ಷಣ ವ್ಯವಸ್ಥೆಯ ಸುಧಾರಣೆ ಕುರಿತು ಕೇಂದ್ರ ಶಿಕ್ಷಣ ಸಚಿವರು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕೃತ ಲಿಖಿತ ಭರವಸೆ ನೀಡಬೇಕು.

ಪ್ರತಿಭಟನೆ ಮತ್ತು ಹೋರಾಟದ ವೇಳೆ ದೆಹಲಿ ಹಾಗೂ ಇತರೆಡೆ ವಿದ್ಯಾರ್ಥಿ ಹೋರಾಟಗಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು. 21 ದಿನಗಳ ನಿರಂತರ ಉಪವಾಸದಿಂದಾಗಿ ಸೋನಮ್ ವಾಂಗ್ಚುಕ್ ಅವರ ತೂಕ 8 ಕೆಜಿಗೂ ಹೆಚ್ಚು ಕಡಿಮೆಯಾಗಿದೆ.

ರಕ್ತದಲ್ಲಿನ ಸಕ್ಕರೆ ಅಂಶ ಇಳಿಕೆಯಾಗಿದ್ದು, ನಿರ್ಜಲೀಕರಣ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರತಿಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಮತ್ತಿತರರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಈ ವಿಷಯ ತೀವ್ರ ಸದ್ದು ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ : ಪ್ರವಾಸಕ್ಕೆ ತೆರಳಿದ್ದ, ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು..!

Related posts

ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ..!

Kalpana Editor

ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ

Kalpana Editor

ಮುಸ್ಲಿಂ ಬಾಂಧವರಿಗೆ ಬಕ್ರೀದ್‌ ಹಬ್ಬದ ಶುಭಾಶಯ ತಿಳಿಸಿದ ಮೋದಿ, ರಾಷ್ಟ್ರಪತಿ

Kalpana Editor