29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಸಲ್ಲಿಸಿದ್ದ, ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌..!

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ ಹೈಕೋರ್ಟ್‌ ವಿಭಾಗೀಯ ಪೀಠ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ.

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರದ ನಡೆಯನ್ನು ವಿರೋಧಿಸಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು ಭೂಸ್ವಾಧೀನಕ್ಕೂ ಮುನ್ನ ಸಾಮಾಜಿಕ ಪರಿಣಾಮ ಅಧ್ಯಯನ ನಡೆಸಿಲ್ಲ. ಪುನರ್ವಸತಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, 9400ಕ್ಕೂ ಅಧಿಕ ಎಕರೆ ಭೂಮಿಯನ್ನು ಪರಿವರ್ತನೆ ಮಾಡಿ, ರಿಯಲ್‌ ಎಸ್ಟೇಟ್‌ ಉದ್ಯಮ ನಡೆಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎನ್ನಲಾಗಿದೆ.

ಇಲ್ಲಿ ರೈತರು ವ್ಯವಸಾಯ ಮಾಡಲು ಬಯಸುತ್ತಿದ್ದಾರೆ. ಹಾಗಾಗಿ 500 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. 80% ರಷ್ಟು ಜನರು ಯೋಜನೆಗೆ ಒಪ್ಪಬೇಕು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಯಾಗಿ, ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಯಾವ ಕಾಯ್ದೆ ಹಾಗೂ ಕಾನೂನಿನ ಉಲ್ಲಂಘನೆಯಾಗಿದೆ ತಿಳಿಸಿ ಎಂದು ಅರ್ಜಿದಾರರ ಪರ ವಕೀಲರಿಗೆ ಪೀಠ ಪ್ರಶ್ನಿಸಿದೆ. ಇದಕ್ಕೆ ವಕೀಲರು ಹೊಸ ಕಾಯ್ದೆಯಡಿ ಭೂಸ್ವಾಧೀನ ಮಾಡಿಲ್ಲ ಎಂದು ಉತ್ತರಿಸಿದರು.

2012ರ ಕಾಯಿದೆ ಅನ್ವಯ ಪರಿಹಾರ ನೀಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಪ್ರಕ್ರಿಯೆ ವಿಭಿನ್ನ ಇರಬಹುದು. ಹೆಚ್ಚುವರಿ ಪರಿಹಾರ ನೀಡಲು ನಿರ್ದಿಷ್ಟ ಕಾಯಿದೆ ಪಾಲಿಸುತ್ತಿರಬಹುದು. ಯಾವುದಾದರೂ ಕಾನೂನಿನ ನಿಬಂಧನೆ ಉಲ್ಲಂಘನೆಯಾಗಿದೆಯೇ ಎಂಬುದನ್ನು ತಿಳಿಸಿ. ನೀವು ವಕೀಲರು. ಕಾನೂನು ಉಲ್ಲಂಘನೆಯಾಗಿರುವುದನ್ನು ತಿಳಿಸಿ. ನಾವು ಯೋಜನೆಯ ಮೆರಿಟ್ ಮೇಲೆ ಪ್ರಕರಣ ನಿರ್ಧರಿಸುವುದಿಲ್ಲ ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.

ಬಿಡದಿಯ ಬಳಿ 516 ಎಕರೆ ಜಮೀನು ಭೂ ಸ್ವಾಧೀನಪಡಿಸಿಕೊಳ್ಳುವ ಕುರಿತಂತೆ ಜೂ.13ರಂದು ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಪಡಿಸಬೇಕು. ಕೃಷಿ ಭೂಮಿಯನ್ನು ನಾಶಪಡಿಸುವ ಬದಲಾಗಿ, ಉತ್ತರ ಕರ್ನಾಟಕದ ಬರಪೀಡಿತ ಅಥವಾ ಕೈಗಾರಿಕಾ ಭೂ ಬ್ಯಾಂಕ್ ‌ಗಳಿರುವ ಹಿಂದುಳಿದ ಪ್ರದೇಶಗಳಿಗೆ ಈ ಯೋಜನೆಯನ್ನು ವಿಕೇಂದ್ರೀಕರಿಸಲು ತಜ್ಞರ ಸಮಿತಿ ರಚಿಸಬೇಕು. ಅಲ್ಲಿಯವರೆಗೆ ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ಭೂಸ್ವಾಧೀನ ಮತ್ತು ಟೆಂಡರ್ ಪ್ರಕ್ರಿಯೆಗಳಿಗೆ ತಕ್ಷಣ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ : ನನ್ನ ತಾಯಿ ಪ್ರೀತಿಯ ಚುಂಬನ; ಪುತ್ರ ರೇವಣ್ಣರಿಂದ ಅಮ್ಮನಿಗೆ ಅಂತಿನ ನಮನ..!

Related posts

ಕಾಮನ್‌ವೆಲ್ತ್ ಗೇಮ್ಸ್‌ – ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ

kknewskannada1987@gmail.com

ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ ಸೋಂಕು ವದಂತಿ ಸುಳ್ಳು – ಸಚಿವ ಯುಟಿ ಖಾದರ್​ ಸ್ಪಷ್ಟನೆ..!

Kalpana Editor

ಹಂಪಿಯ ವಿರೂಪಾಕ್ಷ ದೇಗುಲದ ‘ಲಕ್ಷ್ಮೀ’ ಕೊನೆಗೂ ಕೋಲಾರಕ್ಕೆ ಸ್ಥಳಾಂತರ..!

Kalpana Editor