29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಗಂಭೀರ ಗಾಯ..!

ರಾಯಚೂರು : ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. 4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನು ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಗ್ರಾಮದ ಪೋಷಕರು ಹೆದರಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ : ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ – ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ..!

Related posts

ಹಿಡಕಲ್ ಜಲಾಶಯ ಭರ್ತಿ – ಇಂದು ನೀರು ಬಿಡುಗಡೆ ಸಾಧ್ಯತೆ..!

kknewskannada1987@gmail.com

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ..!

Kalpana Editor

ವಕ್ಫ್ ವಿವಾದ; ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ, ಆರ್‌.ಅಶೋಕ್​​

Kalpana Editor