29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ನಾಲ್ವರು ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ನಗರಸಭೆ ವಿರುದ್ಧ ಪೋಷಕರ ಆಕ್ರೋಶ..!

ಚಿತ್ರದುರ್ಗ : ಬೀದಿ ನಾಯಿಗಳ ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ ಮತ್ತು ನೆಹರು ನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಪುಟ್ಟ ಮಕ್ಕಳು ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದ, ಸುಮಾರು ಐದುರಿಂದ ಆರು ವರ್ಷದ ಮಕ್ಕಳ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ಮಕ್ಕಳ ಮುಖ, ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ. ಗಾಯಗೊಂಡ ಆಲೀನಾ, ಆದಿಲ್, ಮನ್ವಿತ್ ಹಾಗೂ ಮತ್ತೋರ್ವ ಬಾಲಕ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಪರಿಣಾಮವೇ ಇಂದು ಮಕ್ಕಳ ಮೇಲೆ ದಾಳಿ ನಡೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ. ನಗರಸಭೆ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳನ್ನು ಆಸ್ಪತ್ರೆಗೆ ಕರೆತಂದಾಗಲೂ ನಾಯಿ ಕಚ್ಚಿದವರಿಗೆ ಬೇಕಾದ ಇಂಜೆಕ್ಷನ್ ಸಕಾಲಕ್ಕೆ ಲಭ್ಯವಾಗಲಿಲ್ಲ ಎಂದು ದೂರಿದ್ದಾರೆ. ಆಸ್ಪತ್ರೆಯಲ್ಲೇ ಇಂಜೆಕ್ಷನ್ ಇಲ್ಲ ಎಂದು ಹೇಳಿ ಹೊರಗಿನಿಂದ ಖರೀದಿಸಿ ತರಲು ಸೂಚಿಸಿದರು. ಬಳಿಕ ಚಿಕಿತ್ಸೆ ನೀಡಲಾಗಿದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ಹಾವಳಿಗೆ ತಕ್ಷಣವೇ ಕಡಿವಾಣ ಹಾಕಿ, ಇಂತಹ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಗಂಭೀರ ಗಾಯ..!

Related posts

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ..!

kknewskannada1987@gmail.com

ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾದ ಬೆಂಡೆಕಾಯಿ ಸೂಪ್..!

Kalpana Editor

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಇಟ್ಟರೆ, ಭಾರೀ ದಂಡ ಗ್ಯಾರಂಟಿ..!

Kalpana Editor