ಬೆಂಗಳೂರು : ಜಿಬಿಎ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ರವರು ಹಾಗೂ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ರವರು ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಇಂದು ಶಿವಾಜಿನಗರ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದರು ಹಾಗೂ ಅವರಿಗೆ ಧೈರ್ಯ ತುಂಬಿದರು.
ಶಿವಾಜಿನಗರದಲ್ಲಿ ಹಲ್ಲೆಗೆ ಒಳಗಾದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು / ಸಿಬ್ಬಂದಿಗಳು ಹಾಗೂ ಖಾಸಗಿ ಸಿಬ್ಬಂದಿಗಳು; ಮಾಧವರಾವ್ – AEE, ಸಾವಿತ್ರಿ – AEE, ರುಚಿತಾ – AE, ಸಿದ್ದಪ್ಪ – ಜೆಸಿಬಿ ಡ್ರೈವರ್, ಸುನೀಲ್ – ಟ್ರಾಕ್ಟರ್ ಸಿಬ್ಬಂದಿಗಳು ಭೇಟಿ ನೀಡಿದರು.

ಶಿವಾಜಿನಗರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಂತರ ಕೇಂದ್ರ ನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆ ವಿಭಾಗದ ಸಿಬ್ಬಂದಿಗಳು ಆಟೋ ಟಿಪ್ಪರ್ ಹಾಗೂ ಟ್ರಾಕ್ಟರ್ ಮೂಲಕ ತ್ಯಾಜ್ಯ ತೆರವು ಮಾಡಲಾಗುತ್ತಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಮುಂಭಾಗದ ಪಾದಚಾರಿ ಮಾರ್ಗದಲ್ಲಿನ ಅನಧಿಕೃತ “ಕಲ್ಪ ದರ್ಶಿನಿ ಹೋಟೆಲ್” ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ, ಜಂಟಿ ಆಯುಕ್ತರಾದ ರಂಗನಾಥ್, ಹೇಮಂತ್ ಶರಣ್ ಉಪಸ್ಥಿತರಿದ್ದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಉಪಸ್ಥಿತರಿದ್ದು, ಕಾರ್ಯಾಚರಣೆ ಪರಿಶೀಲನೆ ನಡೆಸಿದರು. ಇದನ್ನೂ ಓದಿ : ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿದ್ಯುತ್ ಕಂಬಕ್ಕೆ ಡಿಕ್ಕಿ, ತಪ್ಪಿದ ಅನಾಹುತ..!
