ತುಮಕೂರು : ನಮ್ಮ ಆತ್ಮೀಯ ಮಾಜಿ ಶಾಸಕರಾದ ಗಂಗಹನುಮಯ್ಯನವರ ಪತ್ನಿ ಕಮಲಾ ಗಂಗಹನುಮಯ್ಯನವರು ನಮ್ಮನ್ನು ಅಗಲಿದ್ದಾರೆ. ಅವರು ನಮಗೆಲ್ಲರಿಗೂ ಅತ್ಯಂತ ಪ್ರಿಯವಾಗಿದ್ದಂತಹ ವ್ಯಕ್ತಿ. ಅವರ ನಿಧನದಿಂದ ಅತೀವ ನೋವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವಂತಹ ಶಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಹೇಳಿದರು.

ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲಾ ಅವರು ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು, ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ಇಡೀ ನಮ್ಮ ಜಿಲ್ಲೆಯಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ವಿಶೇಷವಾಗಿ ನಮ್ಮ ಕ್ಷೇತ್ರದ ಮಧುಗಿರಿ ಹಾಗೂ ಕೊರಟಗೆರೆಯ ಜಿಲ್ಲಾ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿ, ಸದಸ್ಯರಾಗಿ ಒಳ್ಳೆಯ ಕೆಲಸ ಮಾಡಿಕೊಂಡು ಜನಮನ್ನಣೆಯನ್ನು ಗಳಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಯುಸಿರಿಳೆದಿದ್ದಾರೆ. ಇದರಿಂದ ನಮಗೆಲ್ಲರಿಗೂ ಅಪಾರ ನಷ್ಟವಾಗಿದೆ ಎಂದು ಭಾವುಕರಾದರು. ಇದನ್ನೂ ಓದಿ : ದಿಢೀರ್ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಜಿಬಿಎ ಮುಖ್ಯ ಆಯುಕ್ತರು ಹಾಗೂ ಕೇಂದ್ರ ನಗರ ಪಾಲಿಕೆಯ ಆಯುಕ್ತರು
