21.6 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಮುಂದಿನ ಆದೇಶದವರೆಗೆ ದೆಹಲಿಯ ಮೆಟ್ರೋ ನಿಲ್ದಾಣ ಬಂದ್‌..!

ನವದೆಹಲಿ : ಸುರಕ್ಷತಾ ಹಿತದೃಷ್ಟಿಯಿಂದ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಮಂಡಿ ಹೌಸ್ ಸೇರಿದಂತೆ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಇಂದಿನಿಂದ (ಬುಧವಾರ) ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಮುಂದಿನ ಆದೇಶದವರೆಗೆ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಿರಲಾಗುತ್ತದೆ ದೆಹಲಿ ಮೆಟ್ರೋ ರೈಲು ನಿಗಮ ತಿಳಿಸಿದೆ.

ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬಾರಾಖಂಬಾ ರೋಡ್, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್, ಶಿವಾಜಿ ಸ್ಟೇಡಿಯಂ ಈ ನಿಲ್ದಾಣಗಳು ಬಂದ್ ಆಗಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ರಾಜೀವ್ ಚೌಕ್, ಮಂಡಿ ಹೌಸ್ ಮತ್ತು ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಬೇರೆ ಲೈನ್‌ಗಳಿಗೆ ಮಾರ್ಗ ಬದಲಾಯಿಸುವ ಸೌಲಭ್ಯವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ನೀಟ್‌ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸಿಜೆಪಿ ಜುಲೈ 20ರಂದು ಹಮ್ಮಿಕೊಂಡಿದ್ದ ‘ಸಂಸದ್ ಚಲೋ’ ಮೆರವಣಿಗೆಗೆ ಸಾವಿರಾರು ಜನರು ದೆಹಲಿಯಲ್ಲಿ ಜಮಾಯಿಸಿದ್ದರಿಂದ, ಸೋಮವಾರವೂ ಸಹ ಮುನ್ನೆಚ್ಚರಿಕೆಯಾಗಿ ಹಲವು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಇದನ್ನೂ ಓದಿ : ನೀಟ್ ಪರೀಕ್ಷೆ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ..!

Related posts

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು – ಸಿಎಂ ಡಿಕೆ ಶಿವಕುಮಾರ್

Kalpana Editor

ಮಲೇಷ್ಯಾದಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ – ಉಲ್ಲಂಘಿಸಿದ್ರೆ 23 ಕೋಟಿ ದಂಡ

Kalpana Editor

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಆರೋಗ್ಯ ಇಲಾಖೆಯಲ್ಲಿ ನೇಮಕಾತಿ..!

Kalpana Editor