August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯದ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ; ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಬಿಜೆಪಿ ನಾಯಕರಿಗೆ ರೈತರ ಬಗ್ಗೆಯೂ ಕಾಳಜಿ ಇಲ್ಲ, ವಿದ್ಯಾರ್ಥಿಗಳ ಬಗ್ಗೆಯೂ ಕಾಳಜಿ ಇಲ್ಲ, ಕಾಟಾಚಾರಕ್ಕೆ ಬರ ಅಧ್ಯಯನ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರು ಬರ ಪರಿಸ್ಥಿತಿಯ ಅಧ್ಯಯನ ಮಾಡಲು ತೆರಳುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಬರ, ನೆರೆ ಪೀಡಿತರ ಬಗ್ಗೆ ಯಾವುದೇ ಕಾಳಜಿ ಇಲ್ಲ, ಅಧಿಕಾರದ ಹಪಾಹಪಿಗೆ ಹೀಗೆ ಮಾಡುತ್ತಿದ್ದಾರೆ ಎಂದರು.

ನಿಜಕ್ಕೂ ರಾಜ್ಯದ ಹಿತಕಾಯುವ ಮನಸ್ಸಿದ್ದರೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ಬಾಕಿ ಹಣ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿ, ಸುಪ್ರೀಂಕೋರ್ಟ್ ಯಾವುದೇ ತಡೆ ನೀಡಿದ್ದರೂ, ಮಹಾದಾಯಿ, ಕಳಸ ಬಂಡೂರಿ ನಾಲಾ ಯೋಜನೆಗೆ ಅನುಮತಿ ನೀಡದೆ ವಿಳಂಬದ್ರೋಹ ಮಾಡುತ್ತಿರುವ ಕೇಂದ್ರದ ಮೇಲೆ ಒತ್ತಡ ಹೇರಿ ಯೋಜನೆಗೆ ಅನುಮೋದನೆ ಕೊಡಿಸಲಿ ಎಂದು ಸವಾಲು ಹಾಕಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ, ಕೇಂದ್ರದಿಂದ ವಿಶೇಷ ಅನುದಾನ ಕೊಡಿಸುವ ಕಾರ್ಯವನ್ನು ರಾಜ್ಯ ಬಿಜೆಪಿ ನಾಯಕರು ಏಕೆ ಮಾಡುತ್ತಿಲ್ಲ. ತೋರಿಕೆಯ ಅಧ್ಯಯನ ಬಿಟ್ಟು, ರಾಜ್ಯಕ್ಕೆ ಒಳಿತನ್ನು ಮಾಡುವ ಬಗ್ಗೆ ಚಿಂತಸಲಿ ಎಂದು ಈಶ್ವರ ಖಂಡ್ರೆ ಹೇಳಿದರು. ಇದನ್ನೂ ಓದಿ : ದುಡಿಯುವ ಕೈಗೆ ಉದ್ಯೋಗ; ಉದ್ಯೋಗ ಖಾತ್ರಿಗೆ ಹಣದ ಕೊರತೆ ಇಲ್ಲ – ಈಶ್ವರ ಖಂಡ್ರೆ

Related posts

7ನೇ ತರಗತಿ ಪಾಸಾಗಿದ್ರೂ ಸಾಕು, ನಿಮಗಿದೆ ಸರ್ಕಾರಿ ಸಂಸ್ಥೆಯಲ್ಲಿ ದುಡಿಯುವ ಅವಕಾಶ..!

Kalpana Editor

19 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್‌ – ಗುಡುಗು ಸಿಡಿಲಿನ ಆರ್ಭಟವೂ ಜೋರು..!

Kalpana Editor

ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ..!

Kalpana Editor