August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಬಿ.ವೈ. ವಿಜಯೇಂದ್ರ ಹಾಗೂ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ಏಕವಚನದಲ್ಲಿ ಮಾತನಾಡಿರುವುದನ್ನು ಖಂಡಿಸಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸುಳ್ಳು ಮಾಹಿತಿ ನೀಡಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಇಬ್ಬರು ನಾಯಕರ ಭಾವಚಿತ್ರಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನಾಕಾರರು ಮಾತನಾಡಿ, ರಾಜ್ಯದಲ್ಲಿ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆ ಸೃಷ್ಟಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿ.ವೈ. ವಿಜಯೇಂದ್ರ ಅವರು ಬಳಸಿರುವ ಭಾಷೆ ಖಂಡನೀಯವಾಗಿದ್ದು, ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಆಡಳಿತಾವಧಿಯಲ್ಲಿನ ಭ್ರಷ್ಟಾಚಾರದ ಆರೋಪಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ನಡೆದಿತ್ತೆಂದು ಕಾಂಗ್ರೆಸ್ ಆರೋಪಿಸುವ ಆರ್ಥಿಕ ವ್ಯವಹಾರಗಳ ಕುರಿತು ಉತ್ತರ ನೀಡಲು ಬಿ.ವೈ. ವಿಜಯೇಂದ್ರ ಸಿದ್ಧರಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಪ್ರತಿಭಟನಾಕಾರರು ಮುಂದಿಟ್ಟರು.

ಸಿ.ಟಿ. ರವಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ಪ್ರತಿಭಟನಾಕಾರರು, ಅವರು ಪದೇಪದೇ ಸುಳ್ಳು ಮಾಹಿತಿ ಹರಡಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು. ಈ ಪ್ರತಿಭಟನೆಯ ಅಂತ್ಯದಲ್ಲಿ ಬಿ.ವೈ. ವಿಜಯೇಂದ್ರ ಹಾಗೂ ಸಿ.ಟಿ. ರವಿ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಜಿ. ಪ್ರಕಾಶ್, ಮುರಳಿ, ಆದಿತ್ಯ, ಕೆ.ಟಿ. ನವೀನ್, ಪುಟ್ಟರಾಜು, ಕುಶಾಲ್ ಹರುವೇಗೌಡ, ನವೀನ್ ಸುಂಕದಕಟ್ಟೆ, ಉಮೇಶ್, ರಂಜಿತ್, ಪ್ರವೀಣ್ ರಾವ್, ಪವನ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ : ರಾಜ್ಯದ ಕಾಳಜಿ ಇದ್ದರೆ ಬಿಜೆಪಿ ನಾಯಕರು ಕೇಂದ್ರದಿಂದ ಬಾಕಿ ಹಣ ಕೊಡಿಸಲಿ; ಈಶ್ವರ ಖಂಡ್ರೆ

Related posts

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ; ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ..!

Kalpana Editor

ಭೀಮಾತೀರದಲ್ಲಿ ಸಾಮೂಹಿಕ ಹತ್ಯೆ ಕೇಸ್‌ – 12 ಆರೋಪಿಗಳ ಅರೆಸ್ಟ್‌..!

Kalpana Editor

ಬೆನ್ನು ನೋವು ಎಂದಿದ್ದ ನಟ ದರ್ಶನ್‌ಗೆ ಅಲೋಕ್ ಕುಮಾರ್ ಸಲಹೆ – ಜೈಲಿನಲ್ಲಿ ಪ್ರಾಣಾಯಾಮ, ಶವಾಸನ..!

Kalpana Editor