August 1, 2026
kranthikidi.com
ತಾಜಾಸುದ್ದಿರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ; ಅನ್ನದಾತರ ಆಕ್ರೋಶ..!

ಬೆಂಗಳೂರು : ಕಾವೇರಿ ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್‌ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ನೀಡಿರುವ ಆದೇಶವು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಮಳೆ ಕೊರತೆ ಮತ್ತು ಭೀಕರ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಈ ಆದೇಶವು “ಗಾಯದ ಮೇಲೆ ಬರೆ ಎಳೆದಂತಿದೆ” ಎಂದು ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಂಡ್ಯ, ಮೈಸೂರು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡ ಸಂಘಟನೆಗಳು ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ ಪಂಜಿನ ಮೆರವಣಿಗೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ನೀರು ಇಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ. ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕೇವಲ 17 ಟಿಎಂಸಿ ನೀರು ಮಾತ್ರ ಲಭ್ಯವಿದೆ.

ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದ್ದು, ಕುಡಿಯುವ ನೀರಿಗೂ ತೀವ್ರ ಅಭಾವ ಎದುರಾಗಲಿದೆ. ಈ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರಿಗೆ ಮರಣ ಶಾಸನ ಎಂದು ಹೇಳಲಾಗಿದೆ. ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಎಚ್ಚರಿಕೆ ನೀಡಿವೆ. ಇದನ್ನೂ ಓದಿ : Gen-Zಗಳಲ್ಲ ʼಜನರೇಷನ್ ಗಟರ್ʼ ಎಂದ ಕಂಗನಾ; ನಟಿ ವಿರುದ್ಧ ನೆಟ್ಟಿಗರು ಗರಂ..!

Related posts

ಟಾಕ್ಸಿಕ್ ಟ್ರೈಲರ್ ಬಿಡುಗಡೆಯ ದಿನಾಂಕ ರಿವೀಲ್; ಹೊಸ ಪೋಸ್ಟರ್ ಮೂಲಕ ಗುಡ್‌ನ್ಯೂಸ್ ನೀಡಿದ ನಟ ಯಶ್

Kalpana Editor

ಫಾಸ್ಟ್-ಟ್ರ್ಯಾಕ್ ಕೋರ್ಟ್ ಸಾಲದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು; ಮೋದಿಗೆ CJP ತಿರುಗೇಟು..!

Kalpana Editor

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Kalpana Editor