22.1 C
ಬೆಂಗಳೂರು
September 21, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಕಾಲೇಜಿಗೆ ನುಗ್ಗಿ ಮಗಳಿಗೆ ಚಾಕು ಇರಿದ ಪಾಪಿ ತಂದೆ..!

ಬೆಂಗಳೂರು : ಕಾಲೇಜಿಗೆ ನುಗ್ಗಿ ತಂದೆಯೇ ಮಗಳಿಗೆ ಚಾಕು ಇರಿದ ಘಟನೆ ರಾಜಾನುಕುಂಟೆಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ದುರ್ಗ ಚಾಕು ಇರಿತಕ್ಕೊಳಗಾದ ಯುವತಿ ಎಂದು ಗುರುತಿಸಲಾಗಿದೆ.

ಆಕೆಯ ತಂದೆ ನಾಗೇಂದ್ರ ಚಾಕು ಇರಿದ ಆರೋಪಿಯಾಗಿದ್ದಾನೆ. ಜು.25ರ ಮಧ್ಯಾಹ್ನ 3:00 ಗಂಟೆ ವೇಳೆಗೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲೇ ಕೃತ್ಯ ನಡೆದಿರುವುದು ಬಳಕಿಗೆ ಬಂದಿದೆ. ಆರೋಪಿ ಕಾಲೇಜಿಗೆ ಬಂದು ಮಗಳನ್ನು ನೋಡಬೇಕು ಎಂದಿದ್ದ. ಬಳಿಕ ಕ್ಯಾಬಿನ್‌ಗೆ ನುಗ್ಗಿ ಮಗಳ ಹೊಟ್ಟೆ, ಎದೆ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನು ಕಾರಣ ಏನೆಂದು ತಿಳಿದುಬಂದಿಲ್ಲ. ಇದನ್ನೂ ಓದಿ : ಕಾಲೇಜಿಗೆ ನುಗ್ಗಿ ಮಗಳಿಗೆ ಚಾಕು ಇರಿದ ಪಾಪಿ ತಂದೆ..!

Related posts

ನಿರ್ಮಾಪಕರ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ ಕೇಸ್; ವಿಚಾರಣೆ ಮುಂದೂಡಿಕೆ..!

Kalpana Editor

ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ – ಉಡುಪಿಗೆ ಆರೆಂಜ್ ಅಲರ್ಟ್ ಘೋಷಣೆ..!

Kalpana Editor

ನಿಕೇತ್‌ ಮೌರ್ಯ, ಭಾವನಾ ರಾಮಣ್ಣ ಸೇರಿದಂತೆ, ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಿದ ಡಿಕೆಶಿ

Kalpana Editor