20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಮಳೆ ಆರ್ಭಟ ಜೋರು; ಹಾರಂಗಿ ಜಲಾಶಯದಿಂದ ನೀರು ಕಾವೇರಿ ನದಿಗೆ..!

ಮಡಿಕೇರಿ : ಕೊಡಗಿನಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದ ಹಿನ್ನೆಲೆ, 5,365 ಕ್ಯೂಸೆಕ್‌ ನೀರನ್ನ ಕಾವೇರಿ ನದಿಗೆ ಹರಿಸಲಾಗಿದೆ. ಜಿಲ್ಲೆಯಾದ್ಯಂತ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ, ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.

ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 4,613 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಳಹರಿವು ಹೆಚ್ಚಿದ ಕಾರಣ 5,365 ಕ್ಯೂಸೆಕ್ಸ್ ನೀರನ್ನ ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ಸಿದ್ಧವಾಗಿದೆ; ವಿಶೇಷ ಉಡುಗೊರೆ..!

Related posts

ಜಪ್ತಿ ಮಾಡಿದ್ದ, ಮದ್ಯದ ಲೆಕ್ಕದಲ್ಲಿ ಭಾರೀ ವ್ಯತ್ಯಾಸ; ಅಬಕಾರಿ ಅಧಿಕಾರಿಗಳ ಮೇಲೆ ʻಲೋಕಾʼ ದಾಳಿ..!

Kalpana Editor

ಪರಿಷತ್‌ ಚುನಾವಣೆ; ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ..!

Kalpana Editor

‘ಕೆಜಿಎಫ್ 3’ ಮಾಡದೆ ಹೊಸ ರಿಸ್ಕ್ ತಗೊಂಡಿದ್ದೇಕೆ..?; ಮೌನ ಮುರಿದ ನಟ ಯಶ್

kknewskannada1987@gmail.com