kranthikidi.com
ತಾಜಾಸುದ್ದಿದೇಶ

ಕರ್ನಾಟಕಕ್ಕೆ ಶಾಕ್‌, ತಮಿಳುನಾಡಿಗೆ ಪ್ರತಿನಿತ್ಯ ನೀರು ಹರಿಸಿ; CWMA

ನವದೆಹಲಿ : ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ದಿನಂಪ್ರತಿ 3,500 ಕ್ಯೂಸೆಕ್‌ನಂತೆ ನೀರು ಹರಿಸಬೇಕು ಎಂದು CWRC ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು CWMA ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದು ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ.

ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ CWMA ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಖುದ್ದಾಗಿ ಭಾಗವಹಿಸಿ ರಾಜ್ಯದ ಜಲಾಶಯಗಳ ನೀರಿನ ಅಭಾವದ ಪರಿಸ್ಥಿತಿಯನ್ನು ವಿವರಿಸಿದರು. ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ : ಪ್ರಶ್ನೆಪತ್ರಿಕೆ ಸೋರಿಕೆ; ಜಾಲ ನಿರ್ಮೂಲನೆಗೆ ಕೇಂದ್ರದ ಕಠಿಣ ಮಸೂದೆ – ಪ್ರಹ್ಲಾದ್ ಜೋಶಿ

Related posts

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ..!

Kalpana Editor

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ – ಸಿಎಂ ಡಿಕೆ ಶಿವಕುಮಾರ್

Kalpana Editor

ಫ್ಲ್ಯಾಟ್ ಬೆಲ್ಲಿ ಆಸೆಗೆ ನನ್ನನ್ನು ನಾನೇ ಹಿಂಸಿಸಿಕೊಂಡಿದ್ದೆ, ಕೆಮಿಕಲ್ ಚಿಕಿತ್ಸೆ ಮಾಡಿಸಿ, ಕೂದಲು ಹಾಳು; ನಟಿ ತಾಪ್ಸಿ ಪನ್ನು

Kalpana Editor