25.3 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಇಂದು 3ನೇ ಆಷಾಢ ಶುಕ್ರವಾರದ ಸಂಭ್ರಮ; ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

ಮೈಸೂರು : ಆಷಾಢ ಮಾಸದ 3ನೇ ಶುಕ್ರವಾರವಾದ ಇಂದು ನಾಡದೇವತೆ ತಾಯಿ ಚಾಮುಂಡಿ ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ. ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಹರಿದುಬಂದಿದ್ದಾರೆ. ಬ್ರಾಹ್ಮಿ ಮುಹೂರ್ತದಿಂದಲೇ ಕೆಲ ಭಕ್ತರು ರಸ್ತೆ ಮಾರ್ಗವಾಗಿ ಬಂದ್ರೆ, ಇನ್ನೂ ಕೆಲವರು ಮೆಟ್ಟಿಲುಗಳ ಮಾರ್ಗವಾಗಿ ಬಂದು ತಾಯಿ ಚಾಮುಂಡಿಯ ದರ್ಶನ ಪಡೆಯುತ್ತಿದ್ದಾರೆ.

3ನೇ ಆಷಾಢ ಶುಕ್ರವಾರವಾದ ಇಂದು ತಾಯಿ ಚಾಮುಂಡಿಗೆ ಲಕ್ಷ್ಮಿ ದೇವಿಯ ಅಲಂಕಾರ ಮಾಡಲಾಗಿದೆ. ಇದರೊಂದಿಗೆ ಇಡೀ ದೇವಸ್ಥಾನದ ಒಳಾಂಗಣವನ್ನ ಚೆಂಡು ಹೂ, ಕಮಲ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿದೆ. ಕಿತ್ತಳೆ, ಮಾವು ಸೇರಿದಂತೆ ಹಲವು ಬಗೆಯ ಹಣ್ಣುಗಳನ್ನೂ ವಿಶೇಷ ಅಲಂಕಾರಕ್ಕೆ ಬಳಸಲಾಗಿದೆ. ದೇವಸ್ಥಾನದ ಒಳಾಂಗಣ ಕರ್ಪೂರ, ಗಂಧ, ಧೂಪದ ಗಮಲಿನಿಂದ ಕೂಡಿದ್ದು, ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿ ಚಾಮುಂಡಿಗೆ ನಾಗಲಕ್ಷ್ಮೀ, 2ನೇ ಶುಕ್ರವಾರದಂದು ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ಈ ಬಾರಿಯೂ ಲಕ್ಷ್ಮಿ ದೇವಿಯ ಅಲಂಕಾರ ಮಾಡಲಾಗಿದೆ. 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ. ಇದನ್ನೂ ಓದಿ : ಇಂದು ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ..!

Related posts

ಪುರಿ ರಥಯಾತ್ರೆಯಲ್ಲಿ ಕಳ್ಳರ ಕೈಚಳಕ; 100ಕ್ಕೂ ಹೆಚ್ಚು ಜೇಬುಗಳ್ಳರು ಅರೆಸ್ಟ್‌..!

Kalpana Editor

ಅರಣ್ಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರ; ಶಾಸಕ ಮಂಜುನಾಥ್

kknewskannada1987@gmail.com

ಪರಪ್ಪನ ಅಗ್ರಹಾರದಲ್ಲಿ ಒಂದೇ ಕಂಪನಿಯ ಫೋನ್‌ಗಳ ಪೂರೈಕೆಯ ಜಾಲ

kknewskannada1987@gmail.com