ಚಾಮರಾಜನಗರ : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ ಆಕಾಂಕ್ಷಿ, ನಟ ಜೋಸೆಫ್ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಿ ಎತ್ತಂಗಡಿ ಮಾಡಲಾಗಿದೆ.
ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡ ಮತ್ತು ರೈತ ಸಂಘಟನೆಗಳು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸ್ಥಳೀಯರ ಆಕ್ರೋಶಕ್ಕೆ ಮಣಿದ ಚಿತ್ರಮಂದಿರದ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ. ಇದನ್ನೂ ಓದಿ : ʻಕಾಕ್ರೋಚ್ʼ ಪ್ರತಿಭಟನೆ ವೇಳೆ ಮೋದಿ ವಿರುದ್ಧ ಪೋಸ್ಟ್ – ಮೆಟಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು..!
