21.5 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿದೇಶ

ʼನನಗಿನ್ನೂ 15 ವರ್ಷ, ನನ್ನನ್ನು ಕ್ಷಮಿಸಿʼ – ಪ್ರಧಾನಿ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ, ಅಪ್ರಾಪ್ತೆ ಕ್ಷಮೆಯಾಚನೆ..!

ನವದೆಹಲಿ : ದೆಹಲಿಯಲ್ಲಿ ನಡೆದ ನೀಟ್‌ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಕ್ಕಾಗಿ ಅಪ್ರಾಪ್ತೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆಕೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾಳೆ ಎಂದು ತಿಳಿದುಬಂದಿದೆ.

ವೈರಲ್‌ ಆದ ವಿಡಿಯೋದಲ್ಲಿ ಯುವತಿ, ನಾನು ಕೆಲವರ ಪ್ರಭಾವಕ್ಕೆ ಒಳಗಾಗಿ ಪ್ರಧಾನಿಯವರ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ಬೇಡಿಕೊಂಡಿದ್ದಾಳೆ. ನನಗಿನ್ನೂ 15 ವರ್ಷ. ನಾನು ಮಾಡಿದ ಕೆಲಸ ಕ್ಷಮೆಗೆ ಅರ್ಹವಲ್ಲ. ನಾನು ದೊಡ್ಡ ತಪ್ಪು ಮಾಡಿದ್ದೇನೆ. ಈ ರೀತಿಯ ತಪ್ಪು ನನ್ನಿಂದ ಮತ್ತೊಮ್ಮೆ ಆಗದಂತೆ ನೋಡಿಕೊಳ್ಳುತ್ತೇನೆ. ಇಡೀ ದೇಶದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾಳೆ.

ಯುವತಿಯ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆಕೆಯ ವಯಸ್ಸು 25 ವರ್ಷ ಎಂದು ಉಲ್ಲೇಖಿಸಲಾಗಿದ್ದರೂ, ವಿಡಿಯೋದಲ್ಲಿ ತಾನು 15 ವರ್ಷದವಳು ಎಂದು ಹೇಳಿಕೊಂಡಿದ್ದಾಳೆ. ನೀಟ್‌ ಪ್ರತಿಭಟನೆಯಲ್ಲಿ ಪ್ರಧಾನಿ ಅವರ ವಿರುದ್ಧ ಅವಹೇಳನಕಾರಿ ಘೋಷಣೆಗಳು ಹಾಗೂ ಪೋಸ್ಟರ್‌ಗಳು ವೈರಲ್‌ ಆದ ಬೆನ್ನಲ್ಲೇ ಕೆಲವು ವಿದ್ಯಾರ್ಥಿಗಳು ವಿಡಿಯೋಗಳ ಮೂಲಕ ನರೇಂದ್ರ ಮೋದಿ ಅವರಿಗೆ ಕ್ಷಮೆಯಾಚಿಸಿದ್ದಾರೆ.

ಇದಕ್ಕೂ ಮುನ್ನ ಜಂತರ್ ಮಂತರ್‌ನಲ್ಲಿ ನಡೆದ ಘಟನೆ, ತಮ್ಮ ಮತ್ತು ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ ನಿಂದನಾತ್ಮಕ ಹೇಳಿಕೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ವಿಡಿಯೋ ಸಂದೇಶವೊಂದನ್ನ ಹಂಚಿಕೊಂಡಿದ್ದರು. ಇದನ್ನೂ ಓದಿ : ನಾನು ಮೈಸೂರಿನ ಅಳಿಯ, ರಾಜ್ಯದಲ್ಲಿ ಬಲಿಷ್ಠ ಸರ್ಕಾರಕ್ಕೆ ಮತ್ತೇ ಅವಕಾಶ ಮಾಡಿಕೊಡಿ: ಡಿಕೆಶಿ

Related posts

ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು..!

Kalpana Editor

ಪರ್ಯಾಯ SIR​ಗೆ ಆದೇಶಿಸಿದ್ದ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್..!

Kalpana Editor

ಇಂದೇ ಉದಯನಿಧಿ ಸ್ಟಾಲಿನ್‌ ಬಿಡುಗಡೆ ಮಾಡಿ; ಮದ್ರಾಸ್‌ ಹೈಕೋರ್ಟ್‌ ತೀರ್ಪು

kknewskannada1987@gmail.com