kranthikidi.com
ತಾಜಾಸುದ್ದಿರಾಜ್ಯ

ಕಬಿನಿ ಡ್ಯಾಮ್‌ನ ಗೇಟ್ ಓಪನ್; 25 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ..!

ಮೈಸೂರು : ಕೇರಳದ ವೈನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಆಗುತ್ತಿದ್ದು, ಮೈಸೂರು ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಡ್ಯಾಮ್‌ನ ಸುರಕ್ಷತೆ ದೃಷ್ಟಿಯಿಂದ ನಾಲ್ಕು ಕ್ರೇಸ್ಟ್ ಗೇಟ್‌ಗಳನ್ನು ತೆರೆದು 25 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯಕ್ಕೆ ಈಗ 30 ಸಾವಿರ ಕ್ಯೂಸೆಕ್ ಒಳ ಹರಿವಿದೆ.

ಹೀಗಾಗಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಕಪಿಲಾ ನದಿಯ ಭೋರ್ಗರೆತ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ನದಿಯ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಆ.1 ರಂದು ಕಬಿನಿಯಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗ್ತಿದೆ.

ಹೀಗಾಗಿ, ಕಾವೇರಿ ಕೊಳ್ಳದ ಜಲಾಶಯಗಳಾದ ಕಬಿನಿ, ಕೆಆರ್‌ಎಸ್, ಹಾರಂಗಿ, ಹೇಮಾವತಿಗೆ ನೀರು ಹರಿದು ಬರ್ತಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನಲ್ಲಿರುವ ಕಬಿನಿ ಸಂಪೂರ್ಣ ಭರ್ತಿಯಾಗಿದೆ. ನದಿಗೆ ನೀರು ಹರಿಸಲಾಗಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆ; ಕರ್ನಾಟಕದಲ್ಲಿ ಎಲ್ಲಿ ಎಷ್ಟು ಮಳೆ..?!

Related posts

ಬೀಳಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ; ಶ್ರೀಗಂಧದ ಕಟ್ಟಿಗೆ ಜಪ್ತಿ..!

Kalpana Editor

ಡ್ರಗ್ಸ್ ಜಾಲದೊಂದಿಗೆ ಪೊಲೀಸ್ ಇಲಾಖೆ ಶಾಮೀಲು – ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತಿದೆ; ಬಸವರಾಜ ಬೊಮ್ಮಾಯಿ ಆಕ್ರೋಶ..!

Kalpana Editor

ದಲಿತರ ಭೂಮಿ ಅಕ್ರಮ ಒತ್ತುವರಿ ಆರೋಪ; ಆರ್ಟ್ ಆಫ್ ಲೀವಿಂಗ್ ವಿರುದ್ಧ ತನಿಖೆಗೆ ಆದೇಶ…!

Kalpana Editor