kranthikidi.com
ಉದ್ಯೋಗತಾಜಾಸುದ್ದಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಕ್ಕೆ 11,403 ಹುದ್ದೆಗಳ ಬಂಪರ್ ನೇಮಕಾತಿ…!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ದೇಶದ ಪ್ರಮುಖ ಸರ್ಕಾರಿ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬೃಹತ್ 11,403 ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. 2024 ರಲ್ಲಿ IBPS ಕ್ಲರ್ಕ್ ಹುದ್ದೆಯನ್ನು ‘ಗ್ರಾಹಕ ಸೇವಾ ಸಹವರ್ತಿ’ ಎಂದು ಮರುನಾಮಕರಣ ಮಾಡಲಾಗಿರುವುದು ಗಮನಿಸಬೇಕಾದ ವಿಷಯ. ಆಸಕ್ತರು ಆಗಸ್ಟ್ 21 ರವರೆಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಬೃಹತ್ ನೇಮಕಾತಿಯಲ್ಲಿ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 1,731 ಹುದ್ದೆಗಳಿದ್ದರೆ, ಕರ್ನಾಟಕದಲ್ಲಿ 1,414 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿ 1,051, ಪಶ್ಚಿಮ ಬಂಗಾಳದಲ್ಲಿ 946 ಹಾಗೂ ದೆಹಲಿ-ಎನ್‌ಸಿಆರ್‌ನಲ್ಲಿ 415 ಹುದ್ದೆಗಳು ಲಭ್ಯವಿವೆ. ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇತರ ಭತ್ಯೆಗಳೊಂದಿಗೆ ಆರಂಭಿಕವಾಗಿ ಸುಮಾರು 24,050 ರೂ. ಮೂಲ ವೇತನ ಸಿಗಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಸಾಮಾನ್ಯ ಕಂಪ್ಯೂಟರ್ ಜ್ಞಾನ ಮತ್ತು ಆಯಾ ರಾಜ್ಯದ ಸ್ಥಳೀಯ ಭಾಷೆಯನ್ನು (ಕನ್ನಡ) ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷದೊಳಗಿರಬೇಕು. ನಿಯಮಗಳ ಪ್ರಕಾರ SC, ST, OBC ಹಾಗೂ ಇತರೆ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಈ ಬಾರಿ ಪ್ರಾಥಮಿಕ ಪರೀಕ್ಷೆಯ ಮಾದರಿಯಲ್ಲಿ ಯಾವುದೇ ಬದಲಾವಣೆಯಿಲ್ಲ, ಆದರೆ ಮುಖ್ಯ ಪರೀಕ್ಷೆಯನ್ನು ಪರಿಷ್ಕರಿಸಲಾಗಿದೆ. ಇನ್ಮುಂದೆ ಮುಖ್ಯ ಪರೀಕ್ಷೆಯಲ್ಲಿ 155 ರ ಬದಲಾಗಿ 160 ಪ್ರಶ್ನೆಗಳು ಇರಲಿವೆ. ಸಮಯವನ್ನು 120 ನಿಮಿಷಗಳಿಂದ 125 ನಿಮಿಷಗಳಿಗೆ ಹೆಚ್ಚಿಸಲಾಗಿದೆ. ಪರಿಮಾಣಾತ್ಮಕ ಸಾಮರ್ಥ್ಯ ವಿಭಾಗದಲ್ಲಿ ಪ್ರಶ್ನೆಗಳ ಸಂಖ್ಯೆಯನ್ನು 35 ರಿಂದ 40 ಕ್ಕೆ ಏರಿಸಲಾಗಿದೆ. ಪ್ರಾಥಮಿಕ ಪರೀಕ್ಷೆಯು ಅಕ್ಟೋಬರ್ 2026 ರಲ್ಲಿ ಹಾಗೂ ಮುಖ್ಯ ಪರೀಕ್ಷೆಯು ಡಿಸೆಂಬರ್ 2026 ರಲ್ಲಿ ನಡೆಯಲಿದೆ.

ಅಭ್ಯರ್ಥಿಗಳ ಆಯ್ಕೆಯನ್ನು ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಮಾಡಲಾಗುತ್ತದೆ. ಪ್ರಾಥಮಿಕ ಪರೀಕ್ಷೆಯು ಕೇವಲ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿ ತಯಾರಿಸಲಾಗುತ್ತದೆ. 10 ನೇ ತರಗತಿ ಅಥವಾ ಅದಕ್ಕಿಂತ ಮೇಲಿನ ಹಂತದಲ್ಲಿ ಸ್ಥಳೀಯ ಭಾಷೆಯನ್ನು ಅಭ್ಯಾಸ ಮಾಡದವರಿಗೆ ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ ಇರಲಿದೆ. SC, ST, PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175ರೂ., ಸಾಮಾನ್ಯ General, OBC ಮತ್ತು EWS ವರ್ಗಗಳ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ನಿಗದಿಪಡಿಸಲಾಗಿದೆ. ಇದನ್ನೂ ಓದಿ : ‘ವಿಕಸಿತ ಭಾರತಕ್ಕೆ ಮಾದಕ ವ್ಯಸನ ಮುಕ್ತ ಯುವಜನತೆ ಅಗತ್ಯ’ – ಅಭಿಯಾನಕ್ಕೆ ಮೋದಿ ಚಾಲನೆ..!

Related posts

ಅಯೋಧ್ಯೆ, ಬದರಿನಾಥ ಬಳಿಕ ಈಗ ವೈಷ್ಣೋದೇವಿಯಲ್ಲೂ ಅಕ್ರಮ..!

Kalpana Editor

ಪ್ರಸಾದದ ಗುಣಮಟ್ಟ ಸುಧಾರಿಸಲು ಮೈಸೂರಿನ ಸಂಸ್ಥೆ ಜೊತೆ ಟಿಟಿಡಿ ಒಪ್ಪಂದ..!

Kalpana Editor

ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ..!

Kalpana Editor