ಬೆಂಗಳೂರು : ಕೋರಮಂಗಲದಲ್ಲಿ ರಾತ್ರಿ ವೇಳೆ ಮಹಿಳೆಯರ ಪಿಜಿಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಯಾರಿಗೂ ಗೊತ್ತಾಗದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾನೆ. ಬೆಳಗಿನ ಜಾವ 3.30ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಬಳಿಯ ಎಸ್‌ಜಿ ಪಾಳ್ಯದಲ್ಲಿ ಮಹಿಳೆಯರ ಪಿಜಿಯಲ್ಲಿ ನಡೆದಿದ್ದು, ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯ ದ್ವಾರದ ಮೂಲಕ ಪಿಜಿಯೊಳಗೆ ಪ್ರವೇಶಿಸಿದ್ದಾನೆ. ಪಿಜಿಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳ, ಅಲ್ಲಿದ್ದ ಲ್ಯಾಪ್‌ಟಾಪ್, ಸ್ಮಾರ್ಟ್‌ವಾಚ್ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ವಿಷಯ ತಿಳಿಯುತ್ತಿದ್ದಂತೆ ಪಿಜಿ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆ ಎಸ್.ಜಿ. ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳ ಆಧಾರದಲ್ಲಿ ಕಳ್ಳನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ : ಎರಡು ಪ್ರಮುಖ ಮ್ಯೂಸಿಕ್ ಕಂಪನಿಗಳು ನನ್ನ ಬ್ಯಾನ್ ಮಾಡಿದ್ದವು; ಸೋನು ನಿಗಮ್
