22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!

ಬೆಂಗಳೂರು : 19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್​​ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್​​ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಲಾಗಿತ್ತು. ಹೀಗಾಗಿ ಖಾಲಿ ಉಳಿದಿರುವ ಒಂದು ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್​​ ಪಾಳಯದಲ್ಲಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ ಶುರುವಾಗಿದೆ.

ಈ ನಡುವೆ ಸಚಿವ ಸ್ಥಾನದಿಂದ ವಂಚಿತರಾಗಿರುವ ಗಾಯತ್ರಿ ಶಾಂತೇಗೌಡ ಪುನಃ ಯತ್ನ ನಡೆಸುತ್ತಿದ್ದು, ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಜೊತೆಗೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಎಂಎಲ್​ಸಿ ಉಮಾಶ್ರೀ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​, ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ಕೂಡ ಸಚಿವ ಸ್ಥಾನದ ರೇಸ್​​ನಲ್ಲಿರುವ ಪ್ರಮುಖರಾಗಿದ್ದಾರೆ.

ಸಚಿವ ಸ್ಥಾನ ಸಂಬಂಧ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಮಹಿಳಾ ಮೀಸಲಾತಿ ಪರ ಧ್ವನಿ ಎತ್ತಿದ್ದೇವೆ, ಅವಕಾಶ ಸಿಗಬೇಕು. ಸಂಪುಟದಲ್ಲಿ ಅವಕಾಶ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ನಯನಾ ಮೋಟಮ್ಮ ಹೇಳಿದ್ದಾರೆ.

ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂಬುದು ನಿಜ. ನನಗೆ ಭರವಸೆಯಿದೆ, ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳುತ್ತೆ. ಪಕ್ಷಕ್ಕಾಗಿ ದುಡಿದಿದ್ದೇವೆ, ಹೀಗಾಗಿ ಹೈಕಮಾಂಡ್ ಪರಿಗಣಿಸುವ ವಿಶ್ವಾಸವಿದೆ ಎಂದು ಉಮಾಶ್ರೀ ತಿಳಿಸಿದ್ದಾರೆ. ಮತ್ತೊಂದೆಡೆ ಪತಿ ಸಮೇತ ಅನ್ನಪೂರ್ಣಾ ತುಕಾರಾಂ ಸಿಎಂ ಡಿಕೆಶಿ ಅವರನ್ನು ಭೇಟಿಯಾಗಿರುವ ಕಾರಣ ಪೈಪೋಟಿ ತೀವ್ರಗೊಂಡಿದೆ. ಇದನ್ನೂ ಓದಿ : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ರಾಜ್ಯಪಾಲ ಡಿವೈ ಪಾಟೀಲ್ ನಿಧನ..!

Related posts

ಪಾಲಿಕೆ ವ್ಯಾಪ್ತಿಯಲ್ಲಿ 8ನೇ ದಿನವೂ ಮುಂದುವರೆದ ಪಾದಚಾರಿ ಒತ್ತುವರಿ ತೆರವು ಕಾರ್ಯ

Kalpana Editor

ನಾರಾಯಣಪುರ ಡ್ಯಾಮ್‌ನಿಂದ ನೀರು ಬಿಡುಗಡೆ; ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆ..!

kknewskannada1987@gmail.com

ನೆಗೆಟಿವ್ ಟ್ರೋಲ್ ಮಾಡುವವರ ವಿರುದ್ಧ ‘ಪೆದ್ದಿ’ ಕಾನೂನು ಕ್ರಮ..!

Kalpana Editor