20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಬರ ವೀಕ್ಷಣೆ ನಡೆಸಿ, ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ; ಸಚಿವ ಕೆ.ಹೆಚ್ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಸಂದ್ರ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ರಾಗಿ, ಜೋಳ ಬೆಳೆ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ ರೈತರಿಂದ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಮಾತನಾಡಿ ಜೂನ್, ಜುಲೈ ನಲ್ಲಿ ಕಡಿಮೆ ಮಳೆ ಆಗಿದೆ. ಆಗಸ್ಟ್ 15 ರೊಳಗೆ ಮಳೆ ಬರದಿದ್ದಲ್ಲಿ ಬಿತ್ತನೆ ಆಗಿರುವ ಬೆಳೆಗಳಿಗೆ ತೊಂದರೆ ಆಗುತ್ತದೆ. ಸಾಧ್ಯವಾದಷ್ಟು ಶಾರ್ಟ್ ಟರ್ಮ್ ರಾಗಿ ಬೆಳೆ ಆಯ್ಕೆ ಮಾಡಿಕೊಳ್ಳಿ ಬೇಗ ಬೆಳೆ ಬರುತ್ತದೆ ಎಂದು ರೈತರಿಗೆ ಸಲಹೆ ನೀಡಿದರು. ತಪ್ಪದೇ ಬೆಳೆ ವಿಮೆ ಮಾಡಿಸಿ ಮಳೆ ಅಭಾವದಿಂದ ಬೆಳೆ ನಷ್ಟ ಆಗುವ ಸಂಭವವಿದೆ. ಹಾಗಾಗಿ ತಪ್ಪದೇ ಎಲ್ಲಾ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಇದರಿಂದ ನಷ್ಟ ಪರಿಹಾರ ಸರಿದೂಗಲಿದೆ ಎಂದರು. ಈಗಾಗಲೇ ಹಲವಾರು ರೈತರು ರಾಗಿ, ಜೋಳ ಬಿತ್ತನೆ ಮಾಡಿದ್ದಾರೆ. ಮಳೆ ಕೊರತೆಯಿಂದ ಸರಿಯಾಗಿ ಹುಟ್ಟಿಲ್ಲ ಎಂದರು.

ಆಗಸ್ಟ್ 30 ವರೆಗೆ ಕಾದು ನೋಡಬೇಕು ಮಳೆ ಬರದಿದಲ್ಲಿ ಸರ್ಕಾರ ಪರಿಹಾರದ ಬಗ್ಗೆ ಚಿಂತನೆ ಮಾಡಲಿದೆ ಎಂದು ಸಚಿವರು ಹೇಳಿದರು. ಜಾನುವಾರುಗಳಿಗೆ ಮೇವಿಗೆ ಸಂಬಂಧಿಸಿದಂತೆ ರೈತರಿಗೆ ಮೇವು ಬಿತ್ತನೆ ಬೀಜ ಪೂರೈಕೆ ಮಾಡಿ. ಮೇವು ಕಿಟ್ ಗಳನ್ನು, ಸೈಲೇಜ್ ಆಹಾರದ ಬಗ್ಗೆ ರೈತರಿಗೆ ಅರಿವು ಮೂಡಿಸಿ, ಪ್ರಸ್ತುತ ಸನ್ನಿವೇಶದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಪಶುಸಂಗೋಪನೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಮಂಗಲ ಕೆರೆಯಲ್ಲಿ ವಾಸ್ತವ ಸ್ಥಿತಿ ಪರಿಶೀಲನೆ ನಡೆಸಿದರು. ಕೆರೆಗಳ ಹೂಳೆತ್ತುವ ಕೆಲಸ ಮೊದಲು ಆಗಬೇಕಿದೆ. ನಂತರ ನೀರು ತುಂಬಿಸುವ ಕೆಲಸ ಮಾಡಬೇಕು. ಕೆರೆಗಳಲ್ಲಿರುವ ಬಿದಿರು ತೆಗೆಯಬೇಕು. ಅರಣ್ಯ ಇಲಾಖೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗೆ ಹುರಿದು ಬರುವ ನೀರಿನ ಕಾಲುವೆಗಳನ್ನು ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹರಿಯಲು ಅನುಕೂಲವಾದರೆ ಮಳೆಗಾಲದಲ್ಲಿ ನೀರು ತುಂಬಲಿದೆ. ಎಲ್ಲಾ ಕೆರೆಗಳ ಸುತ್ತಲೂ ಬೌಂಡರಿ ಫಿಕ್ಸ್ ಮಾಡಿ ಸುತ್ತಲು ಟ್ರೆಂಚ್ ಅಗೆದು, ಹಣ್ಣಿನ ಗಿಡಗಳನ್ನು ಹಾಕಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ತೋಟಗಾರಿಕೆ, ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ : ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್

Related posts

ಅಮ್ಮನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿ, ಅಂತಿಮ ವಿದಾಯ ಹೇಳಿದ ಹೆಚ್​​​​.ಡಿ ಕುಮಾರಸ್ವಾಮಿ

Kalpana Editor

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

Kalpana Editor

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ..!

Kalpana Editor