20.9 C
ಬೆಂಗಳೂರು
September 21, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಉದ್ಯಮಿ ಆದಿಕೇಶವುಲು ಮೊಮ್ಮಗನ ದರ್ಪ; ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆಆರೋಪ..!

ಬೆಂಗಳೂರು : ಉದ್ಯಮಿ ಆದಿಕೇಶವುಲು ಮೊಮ್ಮಗ ಮತ್ತೆ ಸುದ್ದಿಯಲ್ಲಿದ್ದಾರೆ. ಬೆಂಕಿಪೊಟ್ಟಣ ಇಟ್ಟಿಲ್ಲ ಅಂತಾ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ ಪ್ರಕೃತಿ ಅಪಾರ್ಟ್ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಅಪಾರ್ಟ್ಮೆಂಟ್ ಸೆಕ್ಯುರಿಟಿ ಗಾರ್ಡ್ ಪ್ರಕಾಶ್ ಎಂಬವರ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.

ಆದಿಕೇಶವುಲು ಮೊಮ್ಮಗ ಸಿಗರೇಟ್ ಸೇದಲು ಬೆಂಕಿಪಟ್ಟಣ ಕೇಳಿದ್ದರು. ಇಲ್ಲ ಎಂದಿದ್ದಕ್ಕೆ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಪಾರ್ಕಿಂಗ್ ಲಾಟ್‌ನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿರುವ ಆರೋಪವೂ ಕೇಳಿಬಂದಿದ್ದು, ಈ ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಗೆ ಸೆಕ್ಯುರಿಟಿ ಗಾರ್ಡ್, ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಎನ್‌ಸಿಆರ್ ಅಷ್ಟೇ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಡಿಸಿಪಿಗೆ ದೂರು ಕೊಡಲಾಗಿದೆ. ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ಮೋಸ್ಟ್ ವಾಂಟೆಡ್‌ ಆರೋಪಿ ಅರೆಸ್ಟ್‌..!

Related posts

ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಇಂದು ಸಿಎಂ ಭೂಮಿಪೂಜೆ

Kalpana Editor

ಕೋಲ್ಕತ್ತಾದಿಂದ ಬೆಂಗಳೂರಿಗೆ ಐಷಾರಾಮಿ ಬಸ್ ಸೇವೆ ಆರಂಭ..!

Kalpana Editor

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ; ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Kalpana Editor