ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್ 13ರ ವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಿಳಿಸಿದೆ. ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆ, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.
ಆಗಸ್ಟ್ 8ರಂದು ಉತ್ತರ ಒಳನಾಡಿನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 13ರ ವರೆಗೆ ಉತ್ತಮ ಮಳೆಯಾಗಲಿದೆ. ರಾಜ್ಯದಲ್ಲಿ ಮಳೆಯ ವಿಂಗಡಣೆ ಹಾಗೂ ತೀವ್ರತೆ ಆಗಸ್ಟ್ 9ರಿಂದ 13ರ ವರೆಗೆ ತಾತ್ಕಾಲಿಕವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಅಲರ್ಟ್ ಇಲ್ಲ. ಹೀಗಿದ್ದರೂ ಹಗುರದಿಂದ ಸಾಧಾರಣ ಮಳೆ ಬೀಳಲಿದೆ ಎಂದು ಸಿಎಸ್ ಪಾಟೀಲ್ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಪ್ರದೇಶಗಳಲ್ಲಿ ನಾಳೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜೊತೆಗೆ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರಮ ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ : ಕರ್ನಾಟಕದ ರಾಜಕೀಯ ಹೊಲಸು ಮಾಡಿದ್ದೇ ಸಿದ್ದರಾಮಯ್ಯ; ಪ್ರತಾಪ್ ಸಿಂಹ ವಾಗ್ದಾಳಿ..!
